Saval TV on YouTube
ಮೈಸೂರು(Mysuru): ಸಮೃದ್ಧ ಇತಿಹಾಸ ಹೊಂದಿರುವ ಶ್ರೀಮಂತ ಭಾಷೆ ನಮ್ಮ ಕನ್ನಡ. ವಿಶ್ವದ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಪ್ರಮುಖವಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.
ನಗರದ ದೇವೇಗೌಡ ವೃತ್ತದ ಸಮೀಪದ ಕೆ.ಎಸ್.ಎಫ್.ಸಿ. ಬಡಾವಣೆಯಲ್ಲಿ ಏರ್ಪಡಿಸಿದ್ದ 67ನೇ ಕನ್ನಡ ರಾಜ್ಯೋತ್ಸವ ಹಾಗೂ ಯೋಗ ಮಂಟಪ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.
ನಾಡು, ನುಡಿ, ಕಲೆ ಹಾಗೂ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಸುರೇಶ್ ಕುಮಾರ್, ಎಂ.ಕಾಂತರಾಜು, ರಮೇಶ್ ಹಂಚ್ಯಾ, ಕೆ.ಎಸ್.ಎಫ್.ಸಿ. ನಿವಾಸಿಗಳ ಸಂಘದ ಅಧ್ಯಕ್ಷ ಅರುಣ್, ಉಪಾಧ್ಯಕ್ಷ ಮಹೇಂದ್ರ ಡಿ., ಕಾರ್ಯದರ್ಶಿ ಅನಿಲ್ ಕುಮಾರ್, ಖಜಾಂಚಿ ಪ್ರಶಾಂತ್, ನಿರ್ದೇಶಕರಾದ ಸಾವಿತ್ರಮ್ಮ, ರಾಜು, ವೆಂಕಟೇಶ್, ವಿಕಾಶ್ ಕುಮಾರ್, ರವಿ, ನಾಗರಾಜು, ಜೆ.ಜಯರಾಮು, ಮುಖಂಡ ರಾಮು ಇದ್ದರು.