ಮನೆ ರಾಷ್ಟ್ರೀಯ ಗಡಿ ವಿವಾದ ಮಾತುಕತೆ ಮೂಲಕ ಬಗೆಹರಿಯಬೇಕೆಂಬುದು ನಮ್ಮ ನಿಲುವು: ಮಹಾರಾಷ್ಟ್ರ ಸಿಎಂ

ಗಡಿ ವಿವಾದ ಮಾತುಕತೆ ಮೂಲಕ ಬಗೆಹರಿಯಬೇಕೆಂಬುದು ನಮ್ಮ ನಿಲುವು: ಮಹಾರಾಷ್ಟ್ರ ಸಿಎಂ

0

ಬೆಳಗಾವಿ: ಗಡಿ ವಿವಾದ ಮಾತುಕತೆ ಮೂಲಕ ವಿವಾದ ಸರ್ವ ಸಮ್ಮತಿಯಿಂದ ಬಗೆಹರಿಯಬೇಕೆಂಬುದು ನಮ್ಮ ನಿಲುವು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ತಿಳಿಸಿದ್ದಾರೆ.

ಗಡಿ ವಿವಾದದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಈಗಾಗಲೇ ಸಭೆ ನಡೆಸಿದ್ದೇವೆ. ಈ ಹಳೆಯ ವಾದವೇನಿದೆ ಅದು ನ್ಯಾಯಾಲಯದ ಮುಂದಿದೆ. ಸುಪ್ರೀಂ ಕೋರ್ಟ್‌’ನಲ್ಲಿ ಕಾನೂನು ಹೋರಾಟ ನಡೆಯುತ್ತಿದೆ. ಎರಡೂ ರಾಜ್ಯಗಳ ರಾಜ್ಯಪಾಲರ ಸಭೆಯಾಗಿದೆ. ಕೇಂದ್ರ ಸರ್ಕಾರ ಸಹ ಸಕಾರಾತ್ಮಕ ನಿಲುವು ವ್ಯಕ್ತಪಡಿಸಬೇಕಿದೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ಯೋಜನೆಯ ಲಾಭ ಗಡಿಭಾಗದ ಮರಾಠಿಗರಿಗೆ ಸಿಗುತ್ತಿತ್ತೋ ಅದನ್ನು ಹೆಚ್ಚಿಸಿದ್ದೇವೆ. ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿಯನ್ನು ಹತ್ತು ಸಾವಿರ ರೂಪಾಯಿಯಿಂದ 20 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಮುಖ್ಯಮಂತ್ರಿ ಧರ್ಮಾದಾಯ ಸಹಾಯ ನಿಧಿ ಯೋಜನೆಯ ಲಾಭ ಬಂದ್ ಆಗಿತ್ತು. ಅದನ್ನೂ ಮತ್ತೆ ಶುರು ಮಾಡಿದ್ದೇವೆ. ಗಡಿಭಾಗದ ಮರಾಠಿಗರಿಗೆ ಆರೋಗ್ಯ ಸೌಲಭ್ಯ ನೀಡಲು ಮಹಾತ್ಮ ಜ್ಯೋತಿಬಾ ಪುಲೆ ಯೋಜನೆ ನೀಡಲು ನಿರ್ಣಯ ತೆಗೆದುಕೊಳ್ಳಲಾಗಿದೆ. ಗಡಿ ಭಾಗದ ಮರಾಠಿಗರಿಗೆ ಮಹಾರಾಷ್ಟ್ರ ಸರ್ಕಾರದಿಂದ ಸಿಗುವ ಯೋಜನೆಗಳ ಲಾಭ ಹೆಚ್ಚಿಸಿದ್ದೇವೆ. ಮತ್ಯಾರೋ ವಾದ ಸೃಷ್ಟಿಸಿ ಮತ್ತಷ್ಟು ಜಟಿಲಗೊಳಿಸಬಾರದು. ನಾವು ಸಭೆ ನಡೆಸಿದಾಗ ಸಾಕಷ್ಟು ಸಲಹೆಗಳು ಬಂದಿವೆ ಎಂದು ಅವರು ತಿಳಿಸಿದರು.