ಮನೆ ರಾಜ್ಯ ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗೆ: ಹೈಕೋರ್ಟ್‌ ಗೆ ವರದಿ ಸಲ್ಲಿಕೆ; ಜುಲೈ...

ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗೆ: ಹೈಕೋರ್ಟ್‌ ಗೆ ವರದಿ ಸಲ್ಲಿಕೆ; ಜುಲೈ 19ಕ್ಕೆ ವಿಚಾರಣೆ ಮುಂದೂಡಿಕೆ

0

ಬೆಂಗಳೂರು (Bengaluru): ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಮಕ್ಕಳು ಅಂಗನವಾಡಿ ಮತ್ತು ಶಾಲೆಗಳಿಂದ ಹೊರಗುಳಿದಿರುವ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ.

ರಾಜ್ಯದಲ್ಲಿ 14 ವರ್ಷದ ಒಳಗಿನ 10.12 ಲಕ್ಷಕ್ಕೂ ಹೆಚ್ಚು ಮಕ್ಕಳು ಶಾಲೆ ಮತ್ತು ಅಂಗನವಾಡಿಗಳಿಂದ ಹೊರಗುಳಿದಿದ್ದಾರೆ ಎಂಬುದು ಸಮೀಕ್ಷೆಯಿಂದ ತಿಳಿದುಬಂದಿದ್ದು, ಈ ಕುರಿತ ವರದಿಯನ್ನು ಹೈಕೋರ್ಟ್‌ ಗೆ ಸಲ್ಲಿಸಲಾಗಿದೆ.

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವುದಕ್ಕೆ ಸಂಬಂಧಿಸಿದಂತೆ 2013 ರಲ್ಲಿ ಹೈಕೋರ್ಟ್ ದಾಖಲಿಸಿಕೊಂಡಿ ರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಪ್ರಕರಣದ ಅಮಿಕಸ್ ಕ್ಯೂರಿಯಾಗಿರುವ (ಕೋರ್ಟ್‌ಗೆ ಸಹಕರಿಸುವ ವಕೀಲರು) ಹೈಕೋರ್ಟ್‌ನ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರು ಸಮೀಕ್ಷಾ ವರದಿಯನ್ನು ನ್ಯಾಯಪೀಠಕ್ಕೆ ನೀಡಿದರು.

ಶಾಲೆಯಿಂದ ಹೊರಗುಳಿದ 18 ವರ್ಷದೊಳಗಿನ ಮಕ್ಕಳ ಪತ್ತೆಗೆ ನಗರಾಭಿವೃದ್ಧಿ, ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ಗ್ರಾಮೀಣಾಭಿ ವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಪ್ರಾಧಿಕಾರಗಳು ನಡೆಸಿರುವ ಮನೆ-ಮನೆ ಸಮೀಕ್ಷೆಯ ವಸ್ತುಸ್ಥಿತಿ ಅಂಶಗಳನ್ನು ಈ ವರದಿ ಒಳಗೊಂಡಿದೆ.

ವರದಿಯನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಚಿಸಿರುವ ಉನ್ನತಾಧಿಕಾರ ಸಮಿತಿಯು ಇದೇ 16ರಂದು ಸಭೆ ನಡೆಸಬೇಕು. ಶಾಲೆಯಿಂದ ಹೊರಗುಳಿದ, ವಿಶೇಷವಾಗಿ ಅಂಗನವಾಡಿಗಳಿಂದ ಹೊರಗುಳಿದ 3ರಿಂದ 6ವರ್ಷದ ಒಳಗಿನ ಮಕ್ಕಳನ್ನು ವಾಪಸು ಕರೆತರುವ ಬಗ್ಗೆ ಯಾವ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಸಲಹೆ ನೀಡಬೇಕು’ ಎಂದು ನಿರ್ದೇಶಿಸಿ ವಿಚಾರಣೆಯನ್ನು ಜುಲೈ 19ಕ್ಕೆ ಮುಂದೂಡಿದರು.

ಹಿಂದಿನ ಲೇಖನಮುಸ್ಲಿಂ ವೈಯಕ್ತಿಕ ಕಾನೂನು/ಶರಿಯತ್ ಅನ್ನು ಆರ್ಟಿಕಲ್ 14 ರ ವಿಧಿಯಲ್ಲಿ ಪರೀಕ್ಷಿಸಲಾಗುವುದಿಲ್ಲ: ಕೇರಳ ಹೈಕೋರ್ಟ್
ಮುಂದಿನ ಲೇಖನಬಿಇಎಲ್ ನಲ್ಲಿ ಲೈಬ್ರರಿ ಸೈನ್ಸ್ ಪದವೀಧರರಿಗೆ ಉದ್ಯೋಗಾವಕಾಶ