ಮನೆ ರಾಷ್ಟ್ರೀಯ ಫುಟ್ಬಾಲ್ ಕ್ರೀಡಾಂಗಣದಲ್ಲಿ ಪಟಾಕಿ ಕಿಡಿ ತಗುಲಿ 50ಕ್ಕೂ ಹೆಚ್ಚು ಮಂದಿಗೆ ಗಾಯ; ಸಂಘಟಕರ ಮೇಲೆ ಎಫ್...

ಫುಟ್ಬಾಲ್ ಕ್ರೀಡಾಂಗಣದಲ್ಲಿ ಪಟಾಕಿ ಕಿಡಿ ತಗುಲಿ 50ಕ್ಕೂ ಹೆಚ್ಚು ಮಂದಿಗೆ ಗಾಯ; ಸಂಘಟಕರ ಮೇಲೆ ಎಫ್ ಐ ಆರ್

0

ಮಲಪ್ಪುರಂ (ಕೇರಳ): ಕೇರಳದ ಮಲಪ್ಪುರಂ ಜಿಲ್ಲೆಯ ಅರೀಕೋಡ್ ಬಳಿ ಫುಟ್ಬಾಲ್ ಕ್ರೀಡಾಂಗಣದಲ್ಲಿ ಪಟಾಕಿಯ ಕಿಡಿ ತಗುಲಿ 50ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಂಘಟಕರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ.

Join Our Whatsapp Group

ಹತ್ತಕ್ಕೂ ಹೆಚ್ಚು ಜನರ ಮೇಲೆ ಬಿಎನ್‌ಎಸ್ ಸೆಕ್ಷನ್ 288 (ಸ್ಫೋಟಕಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ನಡವಳಿಕೆ) ಹಾಗೂ 125 (ಜನರ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕ್ರಿಯೆ) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮಲಪ್ಪುರಂ ಪೊಲೀಸರು ತಿಳಿಸಿದ್ದಾರೆ.

ಜನ ಕಿಕ್ಕಿರಿದು ಸೇರಿದ್ದ ಅರೀಕೋಡ್ ಫುಟ್ಬಾಲ್ ಕ್ರೀಡಾಂಗಣದಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿತ್ತು. ಮೈದಾನದಲ್ಲಿ ಫುಟ್ಬಾಲ್ ಪಂದ್ಯ ಆರಂಭಕ್ಕೂ ಮುನ್ನ ಪಟಾಕಿ ಸಿಡಿಸಲಾಗುತ್ತಿತ್ತು. ಪರಿಣಾಮ ಪಟಾಕಿ ಕಿಡಿ ಮೈದಾನದಲ್ಲಿ ಹರಡಿ, ಪಂದ್ಯ ವೀಕ್ಷಿಸಲು ಕುಳಿತಿದ್ದ ಜನರ ಮೇಲೆ ಹಾರಿದೆ. ಇದರಿಂದ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಗಾಯಗೊಂಡವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಟಾಕಿ ಸಿಡಿದ ದೃಶ್ಯಗಳು ಮತ್ತು ನಂತರ ಸಂಭವಿಸಿದ ದುರ್ಘಟನೆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.