ಮನೆ ಸುದ್ದಿ ಜಾಲ ಪದ್ಮ ಭೂಷಣ ಪ್ರಶಸ್ತಿ ತಿರಸ್ಕರಿಸಿದ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್‌ ಭಟ್ಟಾಚಾರ್ಯ

ಪದ್ಮ ಭೂಷಣ ಪ್ರಶಸ್ತಿ ತಿರಸ್ಕರಿಸಿದ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್‌ ಭಟ್ಟಾಚಾರ್ಯ

0

ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಎಂ ನಾಯಕ ಬುದ್ದದೇವ್ ಭಟ್ಟಾಚಾರ್ಯ ತಮಗೆ ಘೋಷಣೆ ಮಾಡಲಾದ ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮವಿಭೂಷಣವನ್ನು ತಿರಸ್ಕರಿಸಿದ್ದಾರೆ.

ಪದ್ಮ ಭೂಷಣ ಪ್ರಶಸ್ತಿಗೆ ಆಯ್ಕೆ ಮಾಡುವ ವಿಷಯ ತನಗೆ ಗೊತ್ತಿಲ್ಲ. ಹೀಗಾಗಿ ಪ್ರಶಸ್ತಿಯನ್ನು ತಿರಸ್ಕರಿಸುವುದಾಗಿ ಅವರು ಹೇಳಿದ್ದು, ಈ ನಿರ್ಧಾರ ನರೇಂದ್ರ ಮೋದಿ ಸರ್ಕಾರಕ್ಕೆ ಇರುಸು ಮುರುಸು ಉಂಟು ಮಾಡಿದೆ.

‘ಪದ್ಮ ಭೂಷಣ ಪ್ರಶಸ್ತಿ ನೀಡುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ನನಗೆ ಯಾರೂ ಮಾಹಿತಿ ನೀಡಿಲ್ಲ. ಇದಾಗ್ಯೂ ಅವರು ನನಗೆ ಪ್ರಶಸ್ತಿ ನೀಡುವುದಾದರೆ ನಾನು ಅದನ್ನು ತಿರಸ್ಕರಿಸುತ್ತೇನೆ’ ಎಂದು ಅವರು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಆದರೆ ಕೇಂದ್ರ ಸರ್ಕಾರದ ಮೂಲಗಳ ಮಾಹಿತಿ ಪ್ರಕಾರ, ಭಟ್ಟಾಚಾರ್ಯ ಅವರಿಗೆ ಪ್ರಶಸ್ತಿ ಘೋಷಣೆ ಮಾಡುವ ಬಗ್ಗೆ ಮಾಹಿತಿ ನೀಡಲಾಗಿದೆ. ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಭಟ್ಟಾಚಾರ್ಯ ಅವರ ಪತ್ನಿಯವರೊಂದಿಗೆ ಮಾತನಾಡಿ, ಭಟ್ಟಾಚಾರ್ಯ ಅವರಿಗೆ ಪ್ರಶಸ್ತಿ ಘೋಷಣೆ ಮಾಡುವ ಬಗ್ಗೆ ತಿಳಿಸಿದ್ದರು. ಪತ್ನಿ ಅದನ್ನು ಸ್ವೀಕರಿಸಿ, ಧನ್ಯವಾದ ಕೂಡ ಸಮರ್ಪಿಸಿದ್ದರು ಎಂದು ಗೃಹ ಮಂತ್ರಾಲಯದ ಮೂಲಗಳು ತಿಳಿಸಿವೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತೀಕ್ಷ್ಣ ಟೀಕೆಗಾರರಲ್ಲಿ ಓರ್ವವಾಗಿರುವ 77 ವರ್ಷದ ಬುದ್ಧದೇವ್‌ ಭಟ್ಟಾಚಾರ್ಯ ಅವರು, ಸದ್ಯ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಶ್ವಾಸಕೋಸ ಹಾಗೂ ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವ ಅವರು ಚಿಕಿತ್ಸೆ ಪಡೆಯುತ್ತಿದ್ದು, ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ.

ಪ್ರಶಸ್ತಿ ಘೋಷಣೆಗೂ ಮುನ್ನ ಪ್ರಶಸ್ತಿ ನೀಡಲು ಇಚ್ಛಿಸಿದವರನ್ನು ಸಂಪರ್ಕಿಸಿ ಪ್ರಶಸ್ತಿ ಸ್ವೀಕರಿಸುವ ಬಗ್ಗೆ ಅನುಮತಿ ಕೇಳಲಾಗುತ್ತದೆ. ಅದಾದ್ಯೂ ಬುದ್ಧದೇವ್‌ ಭಟ್ಟಾಚಾರ್ಯ ಅವರು ಪದ್ಮ ಭೂಷಣ ತಿರಸ್ಕಾರ ಮಾಡಿದ್ದು, ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ.

ಹಿಂದಿನ ಲೇಖನರಾಜ್ಯದ ಐವರಿಗೆ ಪದ್ಮ ಶ್ರೀ ಪದ್ಮಶ್ರೀ,  ಬಿಪಿನ್ ರಾವತ್ ಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ
ಮುಂದಿನ ಲೇಖನಯುವರಾಜ್ ಸಿಂಗ್, ನಟಿ ಹೇಜಲ್ ಕೀಚ್ ದಂಪತಿಗೆ ಗಂಡು ಮಗು ಜನನ