ಮನೆ ಅಂತಾರಾಷ್ಟ್ರೀಯ ಪಾಕಿಸ್ತಾನದ ಮಸೀದಿಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ: 83 ಮಂದಿ ಸಾವು

ಪಾಕಿಸ್ತಾನದ ಮಸೀದಿಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ: 83 ಮಂದಿ ಸಾವು

0

ಪೇಶಾವರ: ಪಾಕಿಸ್ತಾನದ ವಾಯವ್ಯ ಭಾಗದ ನಗರ ಪೇಶಾವರದ ಮಸೀದಿಯಲ್ಲಿ ಸೋಮವಾರ ಮಧ್ಯಾಹ್ನ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದ್ದು, 83 ಮಂದಿ ಸಾವನ್ನಪ್ಪಿದ್ದಾರೆ.

ಕನಿಷ್ಠ 57 ಮಂದಿ ಗಾಯಗೊಂಡಿದ್ದಾರೆ, ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಆರೋಗ್ಯಾಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ನಗರದಲ್ಲಿರುವ ಪೊಲೀಸ್‌ ಪ್ರಧಾನ ಕಚೇರಿ ಸಮೀಪದ ಬಿಗಿ ಭದ್ರತೆಯ ಮಸೀದಿಯಲ್ಲಿ ಮಧ್ಯಾಹ್ನದ ಪ್ರಾರ್ಥನೆ ವೇಳೆ ಆತ್ಮಹತ್ಯಾ ಬಾಂಬರ್‌ ತನ್ನನ್ನು ತಾನು ಸ್ಫೋಟಿಸಿಕೊಂಡ. ಸುಮಾರು 400 ಮಂದಿ ಪೊಲೀಸರು ಸ್ಥಳದಲ್ಲಿದ್ದರೂ ಕೂಡ ನಾಲ್ಕು ಹಂತದ ಭದ್ರತಾ ವ್ಯವಸ್ಥೆಯನ್ನು ಆತ ಭೇದಿಸಿಕೊಂಡು ಬಂದಿದ್ದ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಮಸೀದಿಯ ಕಟ್ಟಡದ ಒಂದು ಭಾಗ ಕುಸಿದುಬಿದ್ದಿದ್ದು, ಅದರ ಅಡಿಯಲ್ಲಿ ಹಲವರು ಸಿಕ್ಕಿಹಾಕಿಕೊಂಡಿರುವ ಆತಂಕ ಇದೆ ಎಂದು ಭದ್ರತಾ ಮತ್ತ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಅಫ್ಗಾನಿಸ್ತಾನದಲ್ಲಿ ಕಳೆದ ಆಗಸ್ಟ್‌’ನಲ್ಲಿ ನಡೆದ ದಾಳಿಯ ವೇಳೆ ತೆಹ್ರೀಕ್‌–ಎ–ತಾಲಿಬಾನ್‌ ಪಾಕಿಸ್ತಾನ್‌ (ಟಿಟಿಪಿ) ಕಮಾಂಡರ್‌ ಉಮರ್ ಖಾಲಿದ್‌ ಖುರಸಾನಿ ಮೃತಪಟ್ಟಿದ್ದ. ಅದಕ್ಕೆ ಪ್ರತೀಕಾರವಾಗಿ ಈ ಆತ್ಮಾಹುತಿ ದಾಳಿ ನಡೆಸಲಾಗಿದೆ ಎಂದು ಆತನ ಸಹೋದರ ಹೇಳಿಕೆ ನೀಡಿದ್ದಾನೆ.

ಹಿಂದಿನ ಲೇಖನಜಗತ್ತಿನಲ್ಲಿ ಭಾರತದ ಆರ್ಥಿಕತೆ ಬೆಳಗಲಿದೆ ಎಂಬ ಆಶಾಭಾವವಿದೆ: ಪ್ರಧಾನಿ ಮೋದಿ
ಮುಂದಿನ ಲೇಖನಜಗತ್ತಿಗೆ ಪರಿಹಾರ ನೀಡುವಷ್ಟು ಭಾರತ ಸಶಕ್ತವಾಗಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು