ನವದೆಹಲಿ: ಕದನ ವಿರಾಮ ಮತ್ತೆ ಉಲ್ಲಂಘಿಸಿ ಪಾಕಿಸ್ತಾನ ಬಾಲ ಬಿಚ್ಚಿದೆ. ಜಮ್ಮುವಿನ ಅಖ್ನೂರ್, ಕನಾಚಕ್, ಪರ್ಗ್ವಾಲ್, ರಾಮನಗರ ವಲಯಗಳಲ್ಲಿ ಜೋರಾಗಿ ಸ್ಫೋಟಗಳು ಕೇಳಿಬಂದಿವೆ.
ಜಮ್ಮುವಿನ ಅಖ್ನೂರ್ನಲ್ಲಿ ಸಂಜೆ 7:45 ಕ್ಕೆ ಕದನ ವಿರಾಮ ಉಲ್ಲಂಘನೆಯಾದ ವರದಿಯಾಗಿದೆ. ಹಲವಾರು ಬಾರಿ ಜೋರಾಗಿ ಸ್ಫೋಟಗಳು ಕೇಳಿಬಂದವು. ಅಖ್ನೂರ್, ಕನಾಚಕ್, ಪರ್ಗ್ವಾಲ್ ಮತ್ತು ರಾಮನಗರ ವಲಯಗಳಲ್ಲಿ ಫಿರಂಗಿ ಶೆಲ್ ದಾಳಿ ವರದಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದದ ಸುಮಾರು 2 ಗಂಟೆ 45 ನಿಮಿಷಗಳ ನಂತರ ಈ ಘಟನೆ ಸಂಭವಿಸಿದೆ.
ಉಧಂಪುರದಲ್ಲಿ ಕತ್ತಲೆಯಾದಾಗ ಭಾರತದ ವಾಯು ರಕ್ಷಣಾ ಪಡೆಗಳು ಪಾಕಿಸ್ತಾನಿ ಡ್ರೋನ್ಗಳನ್ನು ತಡೆಹಿಡಿಯುತ್ತಿದ್ದಂತೆ ಕೆಂಪು ಗೆರೆಗಳು ಮತ್ತು ಸ್ಫೋಟಗಳು ಕೇಳಿಬರುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಜೋರಾದ ಸ್ಫೋಟಗಳು ಕೇಳಿಬರುತ್ತಿವೆ. ರಾಜಸ್ಥಾನದ ಬಾರ್ಮರ್ ನಗರದಲ್ಲಿ ಸಂಪೂರ್ಣ ವಿದ್ಯುತ್ ಕಡಿತಗೊಳಿಸಲಾಗಿದೆ. ಪಂಜಾಬ್ನ ಫಿರೋಜ್ಪುರದಲ್ಲಿ ಸಂಪೂರ್ಣ ವಿದ್ಯುತ್ ಕಡಿತಗೊಳಿಸಲಾಗಿದೆ. ರಾಜಸ್ಥಾನದ ಜೈಸಲ್ಮೇರ್ನಲ್ಲಿ ಬ್ಲ್ಯಾಕ್ಔಟ್ ಮಾಡಲಾಗಿದೆ.
“ಪಾಕಿಸ್ತಾನದ ಡಿಜಿಎಂಒ ಇಂದು ಮಧ್ಯಾಹ್ನ 3:35ಕ್ಕೆ ಭಾರತೀಯ ಡಿಜಿಎಂಒಗೆ ಕರೆ ಮಾಡಿದರು. ಭಾರತೀಯ ಕಾಲಮಾನ 5 ಗಂಟೆಯಿಂದ ಜಾರಿಗೆ ಬರುವಂತೆ ಭೂಮಿ, ಗಾಳಿ ಮತ್ತು ಸಮುದ್ರದಲ್ಲಿನ ಎಲ್ಲಾ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ಎರಡೂ ಕಡೆಯವರು ನಿಲ್ಲಿಸುವುದಾಗಿ ಅವರ ನಡುವೆ ಒಪ್ಪಂದ ಮಾಡಿಕೊಳ್ಳಲಾಯಿತು. ಈ ನಿಯಮವನ್ನು ಜಾರಿಗೆ ತರಲು ಎರಡೂ ಕಡೆಯಿಂದಲೂ ಸೂಚನೆಗಳನ್ನು ನೀಡಲಾಗಿದೆ. ಎರಡೂ ದೇಶಗಳ ನಡುವೆ ಮೇ 12ರಂದು ಮಧ್ಯಾಹ್ನ 12 ಗಂಟೆಗೆ ಮತ್ತೆ ಮಾತುಕತೆ ನಡೆಸಯಲಿದೆ” ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದರು. ಆದರೆ, ಅದಾಗಿ ಕೆಲವೇ ಗಂಟೆಗಳಲ್ಲಿ ಜಮ್ಮುವಿನಲ್ಲಿ ಮತ್ತೆ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿದೆ.














