ಮನೆ ರಾಜ್ಯ ಪಂಚಮಸಾಲಿ ಮೀಸಲಾತಿ ಹೋರಾಟ: ಐವರ ವಿರುದ್ಧ ಎಫ್​​ಐಆರ್​

ಪಂಚಮಸಾಲಿ ಮೀಸಲಾತಿ ಹೋರಾಟ: ಐವರ ವಿರುದ್ಧ ಎಫ್​​ಐಆರ್​

0

ಬೆಳಗಾವಿ, ಡಿಸೆಂಬರ್ 11: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ಬುಧವಾರ ನಡೆಸಿದ ಹೋರಾಟದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿತ್ತು.

Join Our Whatsapp Group

ಅಂತೆಯೇ ಏಳು ಸರ್ಕಾರಿ ಬಸ್, ಮೂರು ಪೊಲೀಸ್ ವಾಹನ ಜಖಂಗೊಂಡ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಲ್ಲು ಎಸೆದ ನಿಂಗಪ್ಪ ಬಣದ್, ರಾಮಗೌಡ ಫಕೀರಗೌಡ, ಉಮೇಶ್ ಇಂಗಳೆವಾರ್, ಮಂಜುನಾಥ್ ಬೆಂಡಿಗೇರಿ, ಮಂಜುನಾಥ್ ಗುಮ್ಮಗೋಳ ಹಾಗೂ ಇತರರ ಮೇಲೆ ಎಫ್​ಐಆರ್​ ದಾಖಲಾಗಿದೆ. ಆರೋಪಿತರು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ್ದಾರೆ. ಅಲ್ಲದೇ ಕೊಲೆ ಮಾಡಲು ಯತ್ನಸಿದ್ದಾರೆ. ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಬಿಎನ್‌ಎಸ್ ಕಲಂ 115(2), 109(1), 118(2), 117(2), 352, 351(2), 132, 121, 223, 324,189, 189(3), 191(2), 190 ಅಡಿ ಕೇಸ್ ಪಿಐ ಆರ್.ಆರ್ ಪಾಟೀಲ್ ಅವರು ಕೇಸ್ ದಾಖಲಿಸಿಕೊಂಡಿದ್ದಾರೆ.