ಮನೆ ಆರೋಗ್ಯ ‘ಪರಿಮಳ ಡಿಸೋಜಾ’ ಚಿತ್ರದ ಟ್ರೈಲರ್ ಬಿಡುಗಡೆ

‘ಪರಿಮಳ ಡಿಸೋಜಾ’ ಚಿತ್ರದ ಟ್ರೈಲರ್ ಬಿಡುಗಡೆ

0

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಪರಿಮಳ ಡಿಸೋಜಾ’ ಚಿತ್ರದ ಟ್ರೈಲರ್ ಅನಾವರಣಗೊಂಡಿದೆ.

ಯುವ ಪ್ರತಿಭೆ ವಿನೋದ್ ಶೇಷಾದ್ರಿ ನಟಿಸಿ, ನಿರ್ಮಾಣ ಮಾಡಿರುವ ‘ಪರಿಮಳ ಡಿಸೋಜಾ’ ಚಿತ್ರದ ಟ್ರೈಲರ್ ಅನ್ನು ಅವರು ಬಿಡುಗಡೆಗೊಳಿಸಿದ್ದಾರೆ. ಚಿತ್ರಕ್ಕೆ ಹಿರಿಯ ‌ನಟಿ ಭವ್ಯ ಸಾಥ್​ ನೀಡಿದ್ದಾರೆ.

ಈ ವೇಳೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮಾ. ಹರೀಶ್, ನಿರ್ಮಾಪಕ ಎಂ.ಎನ್ ಸುರೇಶ್ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ನಿರ್ದೇಶಕ ಡಾ. ಗಿರಿಧರ್​ ಹೆಚ್​ ಟಿ, “ಇದೊಂದು ಸಾಂಸಾರಿಕ ಕಥೆ ಒಳಗೊಂಡ ಸಿನಿಮಾ. ಹಿಂದೂ ಕುಟುಂಬದ ಮನೆಗೆ ಕ್ರಿಶ್ಚಿಯನ್ ಹುಡುಗಿ ಸೊಸೆಯಾಗಿ ಬರುತ್ತಾರೆ. ಎಲ್ಲವೂ ಚೆನ್ನಾಗಿ ನಡೆಯುತ್ತಿರುವಾಗ ಒಂದು ಘಟನೆ ನಡೆಯುತ್ತದೆ. ಆ ಘಟನೆ ಏನು? ಅದರಿಂದ ಏನೆಲ್ಲಾ ಆಗುತ್ತದೆ ಎಂಬುದೇ ಈ ಚಿತ್ರದ ಕಥಾವಸ್ತು. ಇದರಲ್ಲಿ ಹೀರೋ ಅಂತ ಯಾರು ಇಲ್ಲ. ಕಥೆಯೇ ನಾಯಕ” ಎಂದು ತಿಳಿಸಿದರು.

ಇದೇ ವೇಳೆ ಕಲಾವಿದರಾದ ಕೋಮಲ ಬನವಾಸೆ, ಸುನೀಲ್ ಮೋಹಿತ್, ರೋಹಿಣಿ ಜಗನ್ನಾಥ, ಚಂದನಾ ಶ್ರೀನಿವಾಸ, ಶಿವಕುಮಾರ ಆರಾಧ್ಯ ಹಾಗೂ ಸಂಕಲನಕಾರ ಸಂಜೀವ ರೆಡ್ಡಿ, ಗಾಯಕಿ ಶೃತಿ ಉಪಸ್ಥಿತರಿದ್ದರು.

ವಿಲೇಜ್ ರೋಡ್ ಫಿಲಂಸ್ ಬ್ಯಾನರ್‌ ಅಡಿಯಲ್ಲಿ ನಿರ್ಮಾಣ ಆಗಿರುವ ಈ ಸಿನಿಮಾ ಸೆಪ್ಟೆಂಬರ್ 15 ರಂದು ತೆರೆ ಕಾಣಲಿದೆ.

ಹಿಂದಿನ ಲೇಖನಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್: ಬಾಲಕಿ ಸಹಿತ ಆರೋಪಿ ಬಂಧನ
ಮುಂದಿನ ಲೇಖನಸ್ನೇಹಿತರ ಜೊತೆ ಅರ್ಕಾವತಿ ನದಿಯಲ್ಲಿ ಈಜಲು ಹೋಗಿದ್ದ ಯುವಕ ನೀರು ಪಾಲು