ಮನೆ ರಾಜಕೀಯ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡರನ್ನು ಕಣಕ್ಕಿಳಿಸಿದ ಕಾಂಗ್ರೆಸ್

ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡರನ್ನು ಕಣಕ್ಕಿಳಿಸಿದ ಕಾಂಗ್ರೆಸ್

0

ಮೈಸೂರು: ಮೈಸೂರು, ಹಾಸನ, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ (ಎಸ್‌ ಟಿಸಿ) ಕರ್ನಾಟಕ ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಅವರ ಹೆಸರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ.

Join Our Whatsapp Group

ಇದೇ ವೇಳೆ ಮಂಗಳವಾರ ಬೆಳಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಸುವುದಾಗಿ ಮರಿತಿಬ್ಬೇಗೌಡ ಘೋಷಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಮರಿತಿಬ್ಬೇಗೌಡರ ಹೆಸರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿಯಿಂದ ಬಂದಿರುವ ಮರಿತಿಬ್ಬೇಗೌಡ ಅವರು ಎರಡು ಬಾರಿ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿದ್ದರು. 2000ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ, 2006 ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ, 2012 ಮತ್ತು 2018 ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಒಟ್ಟು ನಾಲ್ಕು ಬಾರಿ ಎಂಎಲ್‌ಸಿಯಾಗಿ ಆಯ್ಕೆಯಾಗಿದ್ದರು.

ಹಿಂದಿನ ಲೇಖನಆನೆ ಕಂಡು ಚರಂಡಿಗೆ ಇಳಿದ ಬೊಲೇರೋ: ಪ್ರಾಣಾಪಾಯದಿಂದ ಸವಾರರು ಪಾರು
ಮುಂದಿನ ಲೇಖನಟಿವಿ ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಸಂಚಾರ: ನಟಿಗೆ ದಂಡ