ಮನೆ ಸ್ಥಳೀಯ ಪರಿಷತ್‌ ಚುನಾವಣೆ: ಕೈ ಅಭ್ಯರ್ಥಿ ಮರಿತಿಬ್ಬೇಗೌಡ ಇಂದು ನಾಮಪತ್ರ ಸಲ್ಲಿಕೆ

ಪರಿಷತ್‌ ಚುನಾವಣೆ: ಕೈ ಅಭ್ಯರ್ಥಿ ಮರಿತಿಬ್ಬೇಗೌಡ ಇಂದು ನಾಮಪತ್ರ ಸಲ್ಲಿಕೆ

0

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮರಿತಿಬ್ಬೇಗೌಡ ನಾಳೆ(ಮೇ.೧೪) ನಾಮಪತ್ರ ಸಲ್ಲಿಸಲಿದ್ದಾರೆ.

Join Our Whatsapp Group


ನಗರದ ಕಲಾಮಂದಿರದ ಎದುರಿನಿಂದ ಪ್ರಾದೇಶಿಕ ಆಯುಕ್ತರ ಕಛೇರಿಯವರೆಗೆ ಮೆರವಣಿಗೆ ನಡೆಸಿ ಬಳಿಕ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆ ಹಿನ್ನೆಲೆ ಸಭೆ: ಪಡುವಾರಹಳ್ಳಿಯ ಲೀಲಾ ಚೆನ್ನಯ್ಯ ಕಲ್ಯಾಣ ಮಂಟಪದಲ್ಲಿ ಇಂದು (ಮೇ.೧೪) ಬೆಳಗ್ಗೆ 11.00 ಕ್ಕೆ ಮೈಸೂರು, ಚಾಮರಾಜನಗರ, ಹಾಸನ ಹಾಗೂ ಮಂಡ್ಯದ ಜಿಲ್ಲೆಗಳ ಪ್ರಮುಖರು ಹಾಗೂ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿದೆ.
ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಸಚಿವರು ಆದ ಡಾ| ಹೆಚ್.ಸಿ. ಮಹದೇವಪ್ಪ, ಪಶುಸಂಗೋಪನಾ ಸಚಿವರಾದ ಕೆ. ವೆಂಕಟೇಶ್‌ , ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ತಸ್ವೀರ್ ಸೇಠ್‌, ಶಾಸಕ ಕೆ. ಹರೀಶ್‌ ಗೌಡ, ಅನಿಲ್ ಚಿಕ್ಕಮಾದು, ದರ್ಶನ್ ಧೃವನಾರಾಯಣ್‌ ಸೇರಿದಂತೆ ಮೊದಲಾದವರು ಭಾಗವಹಿಸಲಿದ್ದಾರೆ.
ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮೈಸೂರು, ಚಾಮರಾಜನಗರ, ಹಾಸನ ಹಾಗೂ ಮಂಡ್ಯ ಜಿಲ್ಲೆಯ ಕಾಂಗ್ರೆಸ್‌ ಕಾರ್ಯಕರ್ತರು, ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಬೇಕು ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಿ.ಈಶ್ವರಿ ಚಕ್ಕಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಕುಡಿಯುವ ನೀರಿನ ಶುಚಿತ್ವಕ್ಕೂ ಗಮನ ಹರಿಸಿ: ವಿಡಿಯೋ ಸಂವಾದದಲ್ಲಿ ಜಿಪಂ ಸಿಇಒರಿಂದ ಅಧಿಕಾರಿಗಳಿಗೆ ಸೂಚನೆ
ಮುಂದಿನ ಲೇಖನಮುಂಬೈನಲ್ಲಿ ಬಿರುಗಾಳಿ; ಹೋರ್ಡಿಂಗ್ ಬಿದ್ದು ಮೂವರು ಸಾವು, 59 ಜನರಿಗೆ ಗಾಯ