ಮನೆ ರಾಜಕೀಯ ಜನವರಿ 31ರಿಂದ ಏಪ್ರಿಲ್ 8ರವರೆಗೆ ಸಂಸತ್ತಿನ ಬಜೆಟ್ ಅಧಿವೇಶನ

ಜನವರಿ 31ರಿಂದ ಏಪ್ರಿಲ್ 8ರವರೆಗೆ ಸಂಸತ್ತಿನ ಬಜೆಟ್ ಅಧಿವೇಶನ

0

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31ರಂದು ಪ್ರಾರಂಭವಾಗಿ ಏಪ್ರಿಲ್ 8ಕ್ಕೆ ಮುಕ್ತಾಯವಾಗಲಿದ್ದು, ರಾಷ್ಟ್ರಪತಿಗಳು ಜನವರಿ 31ರಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಂಸದೀಯ ವ್ಯವಹಾರಗಳ ಸಚಿವಾಲಯದ ಜನರಲ್, ಬಜೆಟ್ ಅಧಿವೇಶನದ ಮೊದಲ ಭಾಗ ಫೆಬ್ರವರಿ 11ರಂದು ಮುಕ್ತಾಯವಾಗಿ ಒಂದು ತಿಂಗಳ ನಂತರ ಅಂದರೆ ಮಾರ್ಚ್ 14ರಿಂದ ಏಪ್ರಿಲ್ 8ರವರೆಗೆ ಎರಡನೇ ಭಾಗದ ಅಧಿವೇಶನ ನಡೆಯಲಿದೆ. ಫೆಬ್ರವರಿ 1ರಂದು ಕೇಂದ್ರದ 2022-23ರ ಹಣಕಾಸು ವರ್ಷದ ಬಜೆಟ್ ಮಂಡನೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯಸಭೆಯ 256ನೇ ಅಧಿವೇಶನವನ್ನು (ಬಜೆಟ್ ಅಧಿವೇಶನ – 2022) ಜನವರಿ 31ರ ಸೋಮವಾರದಿಂದ ನಡೆಯಲಿದೆ. ಹೋಳಿ ಹಬ್ಬದ ನಿಮಿತ್ತ ಮಾರ್ಚ್ 18ರಂದು ಯಾವುದೇ ಸಭೆ ಇರುವುದಿಲ್ಲ. 2022-23ರ ಕೇಂದ್ರ ಬಜೆಟ್ ಅನ್ನು ಲೋಕಸಭೆಯಲ್ಲಿ ಫೆಬ್ರವರಿ 1 ರಂದು ಬೆಳಗ್ಗೆ 11 ಗಂಟೆಗೆ ಮಂಡಿಸಲಾಗುವುದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಸಂಸತ್ತಿನ 400ಕ್ಕೂ ಹೆಚ್ಚು ಸಿಬ್ಬಂದಿಗೆ ಕೋವಿಡ್​ ಪರೀಕ್ಷೆ ನಡೆಸಲಾಗಿದೆ. ಕೋವಿಡ್-19 ಸಾಂಕ್ರಾಮಿಕದ ಮಧ್ಯೆಯೇ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಉಭಯ ಸದನಗಳ ಸುಗಮ ಕಾರ್ಯ ನಿರ್ವಹಣೆಗೆ ಯೋಜನೆಯನ್ನು ಸಿದ್ಧಪಡಿಸಲು ಈಗಾಗಲೇ ಸದನಗಳಿಗೆ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಹಿಂದಿನ ಲೇಖನಕಲಬುರಗಿ: ಪತ್ನಿ ಹತ್ಯೆಗೈದು, ಮಕ್ಕಳೊಂದಿಗೆ ಪತಿ ಪರಾರಿ
ಮುಂದಿನ ಲೇಖನದೆಹಲಿ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆ