ಮೈಸೂರು: ಚನ್ನಪಟ್ಟಣ ಅಭ್ಯರ್ಥಿ ವಿಚಾರದಲ್ಲಿ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ. ಡಿ.ಕೆ. ಶಿವಕುಮಾರ್ ತಾನೇ ಅಭ್ಯರ್ಥಿ ಎಂದು ಹೇಳಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಗರದಲ್ಲಿ ಶನಿವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಿಗೆ ಪಕ್ಷವು ಉಸ್ತುವಾರಿಗಳನ್ನು ನೇಮಕ ಮಾಡಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಸಚಿವ ಚಲುವರಾಯಸ್ವಾಮಿ ಅಧ್ಯಕ್ಷತೆಯ ಸಮಿತಿಯು ಸಭೆ ನಡೆಸಿ ಟಿಕೆಟ್ ಆಕಾಂಕ್ಷಿಗಳ ವಿವರಗಳನ್ನು ಕೆಪಿಸಿಸಿಗೆ ಸಲ್ಲಿಸಲಿದೆ. ನಂತರವಷ್ಟೇ ಅಭ್ಯರ್ಥಿಗಳ ಆಯ್ಕೆ ಆಗಲಿದೆ ಎಂದರು.
ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎಂಬ ಸತೀಶ ಜಾರಕಿಹೊಳಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಹಿಂದೆಯೂ ಅವರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಸದ್ಯ ಅಂತಹ ಆಲೋಚನೆ ಇದ್ದಂತಿಲ್ಲ. ಪಕ್ದ ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಿದೆ ಎಂದರು.
Saval TV on YouTube