ರಾಮನಗರ: ಕನಕಪುರದಿಂದ ಬೆಂಗಳೂರಿಗೆ ತೆರಳಲು ಬಸ್ ಇಲ್ಲದೆ ವಿದ್ಯಾರ್ಥಿಗಳು, ಊರಿನ ಜನರು ಕೋಪಗೊಂಡು ತಡವಾಗಿ ಬಂದ ಬಸ್ಸನ್ನೇ ತಡೆದು ಪ್ರತಿಭಟನೆ ನಡೆಸಿದ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಬೆಳಗಿನ ಹೊತ್ತು ಹೆಚ್ಚಿನ ವಿದ್ಯಾರ್ಥಿಗಳು ಹಾಗೂ ಕೆಲಸಕ್ಕೆ ಬೆಂಗಳೂರಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚು ಇರುತ್ತದೆ ಆದರೆ ಅದಕ್ಕೆ ಸರಿಯಾದ ಬಸ್ ವ್ಯವಸ್ಥೆ ಇಲ್ಲ, ಇದ್ದರೂ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಎಂದು ಜನ ಆಕ್ರೋಶಗೊಂಡಿದ್ದಾರೆ.
ಈ ವೇಳೆ ತಡವಾಗಿ ಬಂದ ಬಸ್ಸನ್ನು ತಡೆಗಟ್ಟಿ ಕೆಲಹೊತ್ತು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನೆಯನ್ನು ತಡೆಯುವ ಪ್ರಯತ್ನ ಮಾಡಿದರು. ಈ ವೇಳೆ ಪ್ರತಿಭಟನಾ ನಿರತರು ಪೊಲೀಸರನ್ನೇ ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಳಿಗ್ಗೆ ಏಳು ಗಂಟೆಯಿಂದ ಬೆಂಗಳೂರಿಗೆ ಹೋಗಲು ಬಸ್ಸು ಕಾದು ಕಾದು ಸುಸ್ತಾದ ಪ್ರಯಾಣಿಕರು, ತಡವಾಗಿ ಬಸ್ ಬರುತ್ತಲೇ ಬಸ್ ತಡೆದು ಪ್ರತಿಭಟನೆ ನಡೆಸಿ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದಿದ್ದಾರೆ. ಅಲ್ಲದೆ ಸಮಯಕ್ಕೆ ಸರಿಯಾಗಿ ಬಸ್ಸು ಬಿಡುವಂತೆ ಅಧಿಕಾರಿಗಳಿಗೆ ಮನವಿಯನ್ನು ಮಾಡಿದ್ದಾರೆ.














