ಮನೆ ಸುದ್ದಿ ಜಾಲ ಪಟಿಯಾಲ ಉದ್ವಿಗ್ನ: ಮೂವರು ಪೊಲೀಸರ ಧಿಡೀರ್ ವರ್ಗಾವಣೆ

ಪಟಿಯಾಲ ಉದ್ವಿಗ್ನ: ಮೂವರು ಪೊಲೀಸರ ಧಿಡೀರ್ ವರ್ಗಾವಣೆ

0

ಚಂಡೀಗಡ(Chandigad): ಖಾಲಿಸ್ತಾನ ವಿರೋಧಿ ಮೆರವಣಿಗೆಗೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ  ಪಂಜಾಬ್‌ನ ಪಟಿಯಾಲ ಉದ್ವಿಗ್ನಗೊಂಡಿದ್ದು, ಮೂವರು ಪೊಲೀಸ್‌ ಅಧಿಕಾರಿಗಳನ್ನು ದಿಢೀರ್‌ ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಲಾಗಿದೆ. ಇದರೊಂದಿಗೆ ಮೊಬೈಲ್ ಸಂಪರ್ಕ ಸೇವೆಯನ್ನು ಕಡಿತಗೊಳಿಸಲಾಗಿದೆ.

ಪಟಿಯಾಲ ವಲಯ ಐಜಿಪಿ ಸೇರಿದಂತೆ ಮೂವರು ಪೊಲೀಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಮುಖ್ಯಮಂತ್ರಿ ಭಗವಂತ ಮಾನ್‌ ಅವರ ಕಚೇರಿಯಿಂದ ಆದೇಶ ಹೊರಬಿದ್ದಿದೆ.

ಮುಖವಿಂದರ್ ಸಿಂಗ್ ಚಿನ್ನಾ ಅವರನ್ನು ಪಟಿಯಾಲ ವಲಯದ ಹೊಸ ಐಜಿ, ದೀಪಕ್ ಪಾರಿಕ್ ಅವರು ಪಟಿಯಾಲದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ವಜೀರ್ ಸಿಂಗ್ ಅವರನ್ನು ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.

ಏನಿದು ಘಟನೆ ?: ಖಾಲಿಸ್ತಾನ ವಿರೋಧಿ ಮೆರವಣಿಗೆಗೆ ಸಂಬಂಧಿಸಿದಂತೆ ಪಟಿಯಾಲದಲ್ಲಿ ಶುಕ್ರವಾರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಎರಡೂ ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿದ್ದವು. ಈ ವೇಳೆ ನಾಲ್ವರು ಗಾಯಗೊಂಡಿದ್ದರು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಗೃಹ ಇಲಾಖೆಯ ಆದೇಶದ ಮೇರೆಗೆ ಘಟನಾ ಸ್ಥಳದಲ್ಲಿ ಪೊಲೀಸರನ್ನು ಭಾರಿ ಸಂಖ್ಯೆಯಲ್ಲಿ ನಿಯೋಜಿಸಲಾಗಿದ್ದು, ಭದ್ರತೆ ಬಿಗಿಗೊಳಿಸಲಾಗಿದೆ. ಇಂದು ಬೆಳಗ್ಗೆ 9.30ರಿಂದ ಸಂಜೆ 6 ಗಂಟೆ ವರೆಗೆ ಮೊಬೈಲ್‌ ಸಂಪರ್ಕ ಕಡಿತ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಮೊಬೈಲ್‌ ಕರೆ ಹೊರತುಪಡಿಸಿದರೆ, ಇನ್ನಿತರೆ ಯಾವುದೇ ಸಂಪರ್ಕ ಸೇವೆಗಳೂ ಲಭ್ಯವಿರುವುದಿಲ್ಲ.