ಕಲಬುರಗಿ: ನಾವು ಮಾಡಿದ ಕೆಲಸಕ್ಕೆ ಕೂಲಿ ಕೇಳುತ್ತಿದ್ದೇವೆ. ಚುನಾವಣೆಗೆ ಮುನ್ನ ನೀಡಿದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತಂದು ನುಡಿದಂತೆ ನಡೆದು ಈಗ ನಿಮ್ಮ ಆಶೀರ್ವಾದ ಕೇಳುತ್ತಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಸಾತನೂರು ಗ್ರಾಮದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ನಮ್ಮ ಸರ್ಕಾರದ ಐದು ಗ್ಯಾರಂಟಿಗಳ ಮೂಲಕ ಜನರನ್ನು ತಲುಪಿದ್ದೇವೆ. ಈಗ ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಾಗ ಐದು ಪ್ರಮುಖ ಗ್ಯಾರಂಟಿಗಳ ಮೂಲಕ ಎಲ್ಲಾ ವರ್ಗದ ಜನರಿಗೆ ಅನುಕೂಲ ಮಾಡುಕೊಡಲಿದ್ದೇವೆ. “ನಮ್ಮ ಗ್ಯಾರಂಟಿ ಯೋಜನೆಗಳು ಆರ್ಥಿಕ ಸದೃಢತೆ ತರಲು ಸಹಕಾರಿಯಾತ್ತವೆ” ಎಂದರು.
ಅಭಿವೃದ್ಧಿ ಮರೆತ ಜಾಧವ್
ಬಿಜೆಪಿ ಸರ್ಕಾರ ಜನರ ಹಿತ ಕಾಪಾಡುವಲ್ಲಿ ವಿಫಲವಾಗಿದ್ದು, ಸಂಸದರಾಗಿ ಆಯ್ಕೆಯಾಗಿ ಹೋದ ಉಮೇಶ್ ಜಾಧವ್ ಅಭಿವೃದ್ದಿ ಮರೆತಿದ್ದಾರೆ ಈ ಸಲ ನೀವು ಅವರ ವಿರುದ್ಧ ಮತ ಹಾಕಿ ಕಾಂಗ್ರೆಸ್ ಅಭ್ಯರ್ಥಿ ಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ನನ್ನನ್ನು ಆಯ್ಕೆ ಮಾಡಿ ಕಳಿಸಿ ಎಂದು ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮನವಿ ಮಾಡಿದರು.
ವೇದಿಕೆಯ ಮೇಲೆ ಸಾಯಬಣ್ಣ ಪೊಲೀಸ್ ಪಾಟೀಲ, ಭೀಮಣ್ಣ ಸಾಲಿ, ನಾಗರೆಡ್ಡಿ ಪಾಟೀಲ, ರಮೇಶ ಮರಗೋಳ, ಶರಣಪ್ಪ ನಾಟೀಕಾರ್,ಶರಣಪ್ಪ ಸುಣಗಾರ, ಚಂದ್ರಶೇಖರ್ ಟೆಂಗಳಿ,ನಾಗರೆಡ್ಡಿ ಪಾಟೀಲ, ಶಾಂತಪ್ಪ ಚಾಳಿಕರ್, ಶರಣಗೌಡ ಪೊಲೀಸ್ ಪಾಟೀಲ ಸೇರಿದಂತೆ ಹಲವರಿದ್ದರು.