ಮನೆ ಅಪರಾಧ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಸಾವು

ಬೈಕ್ ಡಿಕ್ಕಿಯಾಗಿ ಪಾದಾಚಾರಿ ಸಾವು

0

ಕಟಪಾಡಿ: ಬೈಕ್ ಒಂದು ಡಿಕ್ಕಿ ಹೊಡೆದು ಪಾದಾಚಾರಿಯೊಬ್ಬ ಸಾವನ್ನಪ್ಪಿರುವ  ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ಶನಿವಾರ ನಡೆದಿದೆ.

ಕಟಪಾಡಿ ಏಣಗುಡ್ಡೆ ಅಗ್ರಹಾರದ ಸತೀಶ್ ಮೃತ ದುರ್ದೈವಿ.

ಪಾದಾಚಾರಿ ಸತೀಶ್‌ ಕಟಪಾಡಿಯಲ್ಲಿ ರಸ್ತೆ ದಾಟುತ್ತಿರುವಾಗ ಬೈಕ್‌ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಕಟಪಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನಕಿರುಕುಳದಿಂದ ಪತ್ನಿ ದೂರವಾದರೆ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್
ಮುಂದಿನ ಲೇಖನತುಮಕೂರು: ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ