ಮನೆ ರಾಜ್ಯ ಮಾಸ್ಕ್‌ ಧರಿಸದವರಿಗೆ ಮತ್ತೆ ದಂಡ: ಕೋವಿಡ್‌ ನಿಯಂತ್ರಣ ತಾಂತ್ರಿಕ ಸಲಹಾ ಸಮಿತಿಯಿಂದ ಶಿಫಾರಸು

ಮಾಸ್ಕ್‌ ಧರಿಸದವರಿಗೆ ಮತ್ತೆ ದಂಡ: ಕೋವಿಡ್‌ ನಿಯಂತ್ರಣ ತಾಂತ್ರಿಕ ಸಲಹಾ ಸಮಿತಿಯಿಂದ ಶಿಫಾರಸು

0

ಬೆಂಗಳೂರು (Bengaluru): ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸದವರಿಗೆ ದಂಡ ವಿಧಿಸಲು ಕರ್ನಾಟಕದ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ತಜ್ಞರು ಆರೋಗ್ಯ ಇಲಾಖೆಗೆ ಶಿಫಾರಸ್ಸು ಮಾಡಿದ್ದಾರೆ.

ರಾಜ್ಯಾದ್ಯಂತ ಕೋವಿಡ್‌ ಸೋಂಕಿನ ಪ್ರಕರಣದಲ್ಲಿ ಏರಿಕೆಯಾಗುತ್ತಿದ್ದು, ಓಮಿಕ್ರಾನ್‌ ಉಪತಳಿಗಳ ಪತ್ತೆಯಾಗುತ್ತಿದೆ. ಸೋಂಕಿನ ನಿಯಂತ್ರಣಕ್ಕೆ ಪ್ರತಿಯೊಬ್ಬರು ಮಾಸ್ಕ್‌ ಧರಿಸಬೇಕು. ಸರ್ಕಾರ ಮಾಸ್ಕ್‌ ಧರಿಸುವಂತೆ ಆದೇಶಿಸಿದ್ದರೂ ಸಾರ್ವಜನಿಕರು ಮಾಸ್ಕ್‌ ಧರಿಸುತ್ತಿಲ್ಲ. ಇದು ಸೋಂಕು ಮತ್ತಷ್ಟು ಹೆಚ್ಚಾಗಲು ಕಾರಣವಾಗುತ್ತದೆ. ಹೀಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸದವರಿಗೆ ದಂಡ ವಿಧಿಸಲು ತಜ್ಞರು ಶಿಫಾರಸು ಮಾಡಿದ್ದಾರೆ.

ಕರ್ನಾಟಕದ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಸಭೆ ನಡೆಸಿದ್ದು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣಗಳ ಬಗ್ಗೆ ವಿವರವಾದ ಚರ್ಚೆ ನಡೆಸಿದರು. ಮಾಸ್ಕ್‌ ಧರಿಸದವರಿಗೆ ಸರ್ಕಾರಿ ಸಂಸ್ಥೆಗಳನ್ನು ಪ್ರವೇಶಿಸಲು ಅವಕಾಶ ನೀಡಬಾರದು ಎಂದು ಶಿಫಾರಸು ಮಾಡಿದರು.

ಶಿಫಾರಸುಗಳನ್ನು ಸರ್ಕಾರಕ್ಕೆ ರವಾನಿಸಲಾಗಿದ್ದು, ವಾರದೊಳಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂಬುದು ಸ್ಪಷ್ಟವಾಗಿದೆ. ಆದ್ದರಿಂದ ಕೋವಿಡ್‌ ನಿಯಂತ್ರಣಕ್ಕೆ ಸೂಕ್ತ ನಡವಳಿಕೆಯನ್ನು (ಸಿಇಬಿ) ಅನುಸರಿಸುವುದು ಮತ್ತು ಲಸಿಕೆ ವ್ಯಾಪ್ತಿಯನ್ನು ಸುಧಾರಿಸುವುದು ಇಂದಿನ ಅಗತ್ಯವಾಗಿದೆ. ಆದ್ದರಿಂದ ಶಿಫಾರಸು ಮಾಡಲಾಗಿದೆ ಎಂದು ಟಿಎಸಿ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ.

ಹಿಂದಿನ ಲೇಖನಉಕ್ರೇನ್‌ ನ ಮಾಲ್‌ ಮೇಲೆ ರಷ್ಯಾ ಕ್ಷಿಪಣಿ ದಾಳಿ: 16 ಮಂದಿ ಸಾವು
ಮುಂದಿನ ಲೇಖನಭಾರತ ವಿರುದ್ಧದ ಅಂತಿಮ ಟೆಸ್ಟ್‌ ಪಂದ್ಯಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ