ಮನೆ ರಾಜಕೀಯ ರಾಕೇಶ್ ಸಿದ್ದರಾಮಯ್ಯ ಸಾವಿಗೆ ಸಚಿವ ಭೈರತಿ ಸುರೇಶ್ ಕಾರಣ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ರಾಕೇಶ್ ಸಿದ್ದರಾಮಯ್ಯ ಸಾವಿಗೆ ಸಚಿವ ಭೈರತಿ ಸುರೇಶ್ ಕಾರಣ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

0

ನವದೆಹಲಿ: ರಾಕೇಶ್ ಸಿದ್ದರಾಮಯ್ಯ ಸಾವಿಗೆ ಸಚಿವ ಭೈರತಿ ಸುರೇಶ್ ಕಾರಣ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ನಾನು ಆ ಮಾತನ್ನು ಹೇಳಲಾ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.

Join Our Whatsapp Group

ಸೋಮವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಭೈರತಿ ಸುರೇಶ್ ದರೋಡೆಕೋರ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಹಾಳು ಮಾಡಿದವರು. ಅವರನ್ನು ಹೆಬ್ಬಾಳದಿಂದ ಓಡಿಸುತ್ತೇವೆ ಎಂದರು.

ಬಿ.ಎಸ್‌.ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂದು ನನಗೆ ಅನುಮಾನವಿದೆ. ಈ ಬಗ್ಗೆ ತನಿಖೆಯಾಗಲಿ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಇತ್ತೀಚೆಗೆ ಆರೋಪಿಸಿದ್ದರು.