ಮನೆ ರಾಜ್ಯ ನಿರೀಕ್ಷೆಗೂ ಮೀರಿ ಗುಜರಾತ್ ಜನತೆ ಬಿಜೆಪಿಗೆ ಮತ ನೀಡಿದ್ದಾರೆ: ಸಚಿವ ಕೆ.ಗೋಪಾಲಯ್ಯ

ನಿರೀಕ್ಷೆಗೂ ಮೀರಿ ಗುಜರಾತ್ ಜನತೆ ಬಿಜೆಪಿಗೆ ಮತ ನೀಡಿದ್ದಾರೆ: ಸಚಿವ ಕೆ.ಗೋಪಾಲಯ್ಯ

0

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಗುಜರಾತಿನ  ಜನತೆ ಭಾರತೀಯ ಜನತಾ ಪಾರ್ಟಿಯನ್ನು ಒಪ್ಪಿಕೊಂಡಿದ್ದಾರೆ.ನಿರೀಕ್ಷೆಗೂ ಮೀರಿ ಗುಜರಾತ್ ಜನತೆ ಭಾರತೀಯ ಜನತಾ ಪಕ್ಷಕ್ಕೆ ಮತ ನೀಡಿದ್ದಾರೆ ಎಂದು ಅಬಕಾರಿ ಸಚಿವರು ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ  ಮಾತನಾಡಿದ ಅವರು ಹಿಮಾಚಲ ಪ್ರದೇಶದಲ್ಲಿಯೂ ಸಹ ನಾವೇ ಅಧಿಕಾರವನ್ನು ನಡೆಸುತ್ತಿದ್ದೇವೆ. ಎರಡು ರಾಜ್ಯದಲ್ಲಿಯೂ ಸಹ ನಮ್ಮ ಪಕ್ಷ ಬರುತ್ತದೆ ಎಂದು ಹೇಳಿದ್ದೇವು ಇಂದು ಜನರು ತೀರ್ಪನ್ನು ಕೊಟ್ಟಿದಾರೆ ಇದನ್ನು ವಿರೋಧ ಪಕ್ಷಗಳು ಒಪ್ಪಿಕೊಳ್ಳಬೇಕು ಎಂದು ಹೇಳಿದರು.

ಕರ್ನಾಟಕದಲ್ಲಿ ಮುಂದಿನ 2023ರ ಚುನಾವಣೆಯಲ್ಲಿಯೂ ಸಹ ಭಾರತೀಯ ಜನತಾ ಪಾರ್ಟಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹಾಗೂ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿರವರ ನಾಯಕತ್ವದಲ್ಲಿ ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದರು.

ಮೋದಿಜೀ ಅವರ ನಾಯಕತ್ವವನ್ನು ಗುಜರಾತ್ ಜನತೆ ಒಪ್ಪಿಕೊಂಡಿದ್ದಾರೆ ಹಾಗಾಗಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಹಿಂದಿನ ಲೇಖನಹಿಮಾಚಲಪ್ರದೇಶದಲ್ಲಿ ಬಿಜೆಪಿಗೆ 2 ಕ್ಷೇತ್ರಗಳಲ್ಲಿ ಜಯ: ಹಾಲಿ ಸಿಎಂ ಜೈರಾಮ್​ ಠಾಕೂರ್​ ಗೆಲುವು
ಮುಂದಿನ ಲೇಖನಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಬಾಲಕಿ ತಾಯಿ ಸೇರಿದಂತೆ ಮೂವರಿಗೆ ಶಿಕ್ಷೆ, ಬಾಲಕಿಗೆ 5 ಲಕ್ಷ ಪರಿಹಾರ