ಮನೆ ರಾಷ್ಟ್ರೀಯ ವಿಕಲಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ

ವಿಕಲಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ

0

ಬೆಂಗಳೂರು: ರಾಜ್ಯದ ಒಂದೇ ಹಂತದಲ್ಲೇ ಮತದಾನ ನಡೆಯಲಿದೆ. ಮೇ 10ರಂದು ಮತದಾನ ನಡೆಯಲಿದ್ದು,  ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.

ಕೇಂದ್ರ ಚುನಾವಣೆ ಆಯೋಗವು ಇದೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಹಾಗೂ ಹಾಸಿಗೆ ಬಿಟ್ಟು ಏಳಲಾಗದ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡುವ ಅವಕಾಶ ನೀಡಲಾಗಿದೆ.

ಈ ಬಗ್ಗೆ ಇಂದು (ಮಾರ್ಚ್ 29) ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 5.21 ಕೋಟಿ ಮತದಾರರು ಇದ್ದು, ಇದರಲ್ಲಿ 80 ವರ್ಷ ಮೇಲ್ಪಟ್ಟವರು ಮತದಾರರು 12,15,763 ಇದ್ದು, 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. ಇನ್ನು ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ. ಇವರೆಲ್ಲರಿಗೂ ಮನೆಯಿಂದ ಮತದಾನ ಮಾಡುವ ಅವಕಾಶ ನೀಡಲಾಗಿದೆ.

ಮನೆಯಿಂದ ಮತದಾನ ಹೇಗೆ?

•  ಚುನಾವಣೆ ಆಯೋಗದ ವೆಬ್ ಸೈಟ್, ವೋಟರ್ ಹೆಲ್ಪ್ ಲೈನ್ ಅಥವಾ ಸಕ್ಷಮ್ ಆ್ಯಪ್ ನಲ್ಲಿ ನೋಂದಣಿ ಕಡ್ಡಾಯ.

•  ಸ್ಥಳೀಯ ಬೂತ್ ಮಟ್ಟದ ಚುನಾವಣಾಧಿಕಾರಿಗಳ ಕಚೇರಿಗಳಲ್ಲೂ ನೋಂದಣಿ ಮಾಡಿಸಲು ಅವಕಾಶ

•  ನೋಂದಣಿ ಮಾಡಿಸಿಕೊಂಡ ಮತದಾರರ ಮನೆಗೆ ಪೊಲೀಸ್ ಭದ್ರತೆಯಲ್ಲಿ ಅಂಚೆ ಮತಚೀಟಿ ರವಾನೆ

•  ಮನೆಯಲ್ಲೇ ಗೌಪ್ಯ ಮತದಾನಕ್ಕೆ ಅವಕಾಶ. ಇಡೀ ಮತದಾನ ಪ್ರಕ್ರಿಯೆ ಬಗ್ಗೆ ವಿಡಿಯೋ ಚಿತ್ರೀಕರಣ

•  ಈ ರೀತಿ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗಾಗಿ ರಾಜಕೀಯ ಪಕ್ಷಗಳಿಗೆ ಮುಂಚಿತವಾಗಿ ಮಾಹಿತಿ

ಕರ್ನಾಟಕ ಚುನಾವಣೆಯ ಪ್ರಮುಖ ದಿನಾಂಕಗಳು

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಇದೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಇನ್ನ ನಾಮಪತ್ರ ಸಲ್ಲಿಕೆ ಏಪ್ರಿಲ್ 13 ರಂದೇ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆದಿನವಾಗಿದೆ. ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆ ದಿನವಾಗಿದೆ.

ಹಿಂದಿನ ಲೇಖನದುರ್ಗಾಷ್ಟಮಿ ಪುಣ್ಯ ದಿನದಂದು ಎಲೆಕ್ಷನ್ ಘೋಷಣೆ: ಕಾಂಗ್ರೆಸ್ ಭರವಸೆ ಜಾರಿಗೆ ತರೋಣ ಎಂದ ರಣದೀಪ್ ಸಿಂಗ್ ಸುರ್ಜೇವಾಲ
ಮುಂದಿನ ಲೇಖನಪಿಎಂಎಲ್ಎ ಸೆಕ್ಷನ್ 50 ಮತ್ತು 63ರ ಸಿಂಧುತ್ವ ಪರೀಕ್ಷೆ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್