ಬೆಂಗಳೂರು: ನಮ್ಮ ರಾಜ್ಯದಲ್ಲಿ ಶೇ 80 ರಷ್ಟು ಬಿಪಿಎಲ್ ಕಾರ್ಡುಗಳಿವೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.
ರಾಜ್ಯದಲ್ಲಿ ಬಿಪಿಎಲ್ ಕಾರ್ಡು ರದ್ದು ವಿಚಾರ ಸಾಕಷ್ಟು ಸುದ್ದಿಯಾಗಿದ್ದು ಈ ಕುರಿತು ಇಂದು ಮಾತನಾಡಿದ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಪ್ರತಿಪಕ್ಷಗಳು ಸುಮ್ಮನೆ ರಾಜಕೀಯವಾಗಿ ಮಾತನಾಡುತ್ತಿದ್ದಾರೆ ಅಷ್ಟೆ. ದಕ್ಷಿಣ ಭಾರತದಲ್ಲೇ ರಾಜ್ಯದಲ್ಲಿ ಶೇ 80 ರಷ್ಟು ಬಿಪಿಎಲ್ ಕಾರ್ಡ್ ಗಳಿವೆ. ತಮಿಳುನಾಡು, ಕೇರಳ, ಆಂಧ್ರ, ತೆಲಂಗಾಣದಲ್ಲಿ ಶೇ 50ರಷ್ಟರ ಮೇಲೆ ಬಿಪಿಎಲ್ ಕಾರ್ಡ್ ಗಳಿಲ್ಲ. ಆದರೆ ನಮ್ಮ ರಾಜ್ಯದಲ್ಲಿ ಕೆಲವರು ಅರ್ಹರಲ್ಲದವರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಅಂತಹವರ ಬಿಪಿಎಲ್ ಕಾರ್ಡ್ ತೆಗೆದು ಹಾಕ್ತೇವೆ ಎಂದರು.
ರಾಜ್ಯದಲ್ಲಿ 6.5 ಕೋಟಿ ಜನರ ಪೈಕಿ 4.5 ಕೋಟಿ ಬಿಪಿಎಲ್ ಫಲಾನುಭವಿಗಳು ಇದ್ದಾರೆ. ಬಿಪಿಎಲ್ ಅರ್ಹರಲ್ಲದವರನ್ನು ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡುತ್ತೇವೆ. ಎಪಿಎಲ್ ಕಾರ್ಡುದಾರರಿಗೂ ಬೇರೆ ಬೇರೆ ಸೌಲಭ್ಯವಿದೆ ಎಂದು ಸಚಿವ ಮುನಿಯಪ್ಪ ತಿಳಿಸಿದರು.