ಮನೆ ರಾಜಕೀಯ ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ: ಸಚಿವ ಕೆ.ಗೋಪಾಲಯ್ಯ

ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ: ಸಚಿವ ಕೆ.ಗೋಪಾಲಯ್ಯ

0

ಹಾಸನ(Hassan): ಕಾಫಿ ಬೆಳೆಗಾರರ ಸಮಸ್ಯೆಗಳಿಗೆ(Coffee growers Problems) ರಾಜ್ಯ ಸರ್ಕಾರ(State Governament) ಶಾಶ್ವತ ಪರಿಹಾರ(solution) ಕಲ್ಪಿಸಲಿದೆ ಎಂದು  ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ(K.Gopalaiah) ಹೇಳಿದರು.

ಹಾಸನದಲ್ಲಿಂದು ನಡೆದ ಜಿಲ್ಲಾ ಕಾಫಿ ಬೆಳೆಗಾರರ ಅನಧಿಕೃತ ಸಾಗುವಳಿಯನ್ನು ಸಾಗುವಳಿಯನ್ನು ಅಧಿಕೃತ ಗೊಳಿಸುವ ಕುರಿತ ಸಭೆಯನ್ನು  ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್, ಜನತಾದಳ ಸರ್ಕಾರಗಳು ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ. ನಮ್ಮ ಸರ್ಕಾರದ‌ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಕಂದಾಯ ಸಚಿವರಾದ ಆರ್.ಅಶೋಕ‌ ಅವರು ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಕಾಫಿ ಬೆಳೆಗಾರರ ಭೂಮಿ ಎಷ್ಟು ಒತ್ತುವರಿಯಾಗಿದೆ ಮೊದಲಾದ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು ಶೀಘ್ರವೇ ಸೂಕ್ತವಾದ ನ್ಯಾಯವನ್ನು ಕೊಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್.ಆಶೋಕ,ಶಾಸಕ‌ ಪ್ರೀತಂಗೌಡ, ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಎಚ್.ಸಿ. ಮೋಹನ್, ಹಾಸನ‌ ಜಿಲ್ಲಾ ಅಧ್ಯಕ್ಷ ‌ಸುಬ್ರಮಣ್ಯ,ಮತ್ತು ಜಿಲ್ಲಾ ಕಾಫಿ ಬೆಳೆಗಾರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.