ನವದೆಹಲಿ: ದೇಶದಲ್ಲಿ ಮತ್ತೆ ತೈಲ ದರ ಏರಿಕೆಯಾಗುತ್ತಲೇ ಇದ್ದು, ಶನಿವಾರ ನಾಲ್ಕನೇ ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಾಗಿದೆ.
ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ 80 ಪೈಸೆ ಹೆಚ್ಚಳವಾಗಿದ್ದು, ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ರೂ.98.61 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ ರೂ.89.87 ದಾಖಲಾಗಿದೆ.
ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 84 ಪೈಸೆ ಹೆಚ್ಚಳವಾಗಿದ್ದು, ಡೀಸೆಲ್ ಬೆಲೆಯಲ್ಲಿ 85 ಪೈಸೆ ಏರಿಕೆಯಾಗಿದೆ. ಈ ಮೂಲಕ ಲೀ.ಪೆಟ್ರೋಲ್ ದರ ರೂ.113.35, ಡೀಸೆಲ್ ರೂ.97.55 ದಾಖಲಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 104.43 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.47 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 103.93 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.14 ರೂಪಾಯಿ ದಾಖಲಾಗಿದೆ.
ಇನ್ನು ಬೆಂಗಳೂರಿನಲ್ಲಿ 103.09 ರೂ ಇದ್ದ ಪೆಟ್ರೋಲ್ ದರ 103.91ರೂಗೆ ಏರಿಕೆಯಾಗಿದೆ. ಪ್ರತಿ ಲೀಟರ್ಗೆ 87.35 ರೂ ಇದ್ದ ಡೀಸೆಲ್ ದರ ರೂ. 88.12ಗೆ ಏರಿಕೆಯಾಗಿದೆ.
ಹೈದರಾಬಾದ್ನಲ್ಲೂ ದರ ಏರಿಕೆಯಾಗಿದ್ದು, ಲೀಟರ್ಗೆ ಪೆಟ್ರೋಲ್ ಬೆಲೆ 111.78ರೂ ಹಾಗೂ ಡೀಸೆಲ್ಗೆ 98.08ರೂ ದಾಖಲಾಗಿದೆ. ಲಖನೌದಲ್ಲಿ ಪೆಟ್ರೋಲ್ ದರ 98.44ರೂ ಹಾಗೂ ಡೀಸೆಲ್ ದರ 90 ರೂಗೆ ಏರಿಕೆಯಾಗಿದೆ.