ಮನೆ ರಾಜ್ಯ ಮುನ್ನೆಚ್ಚರಿಕೆ ಕ್ರಮವಾಗಿ ಪಿಎಫ್ಐ ಮುಖಂಡರು ವಶಕ್ಕೆ: ಆರಗ ಜ್ಞಾನೇಂದ್ರ

ಮುನ್ನೆಚ್ಚರಿಕೆ ಕ್ರಮವಾಗಿ ಪಿಎಫ್ಐ ಮುಖಂಡರು ವಶಕ್ಕೆ: ಆರಗ ಜ್ಞಾನೇಂದ್ರ

0

ಬೆಂಗಳೂರು(Bengaluru): ಎನ್ ಐ ಎ ದಾಳಿಯ ಸಂದರ್ಭದಲ್ಲಿ ಪ್ರತಿಭಟನೆ ನಡೆದ ಉದ್ವಿಗ್ನ ವಾತಾವರಣ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಈ ಕುರಿತಾಗಿ ಮಾಹಿತಿ ನೀಡಿದ ಅವರು, ರಾಜ್ಯದ ಹಲವು ಕಡೆಗಳಲ್ಲಿ ಪೊಲೀಸರು ದಾಳಿ ನಡೆಸಿ ಮುನ್ನೆಚ್ಚರಿಕೆಯ ಕ್ರಮವಾಗಿ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ  ಎಂದು ತಿಳಿಸಿದರು.

ಇತ್ತೀಚೆಗೆ ಎನ್’ಐಎ ಅಧಿಕಾರಿಗಳು ಕೆಲವರ ನಿವಾಸಗಳ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಪಿಎಫ್ಐ ಸಂಘಟನೆಗೆ ಸೇರಿದ ಕೆಲವು ಕಾರ್ಯಕರ್ತರು ಬೀದಿಗೆ ಬಂದು ಪ್ರತಿಭಟಿಸಿ ಉದ್ವಿಗ್ನ ವಾತಾವರಣ ನಿರ್ಮಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.