ಮನೆ ಕಾನೂನು ಫೋನ್ ಕದ್ದಾಲಿಕೆ ಪ್ರಕರಣ: ಚಿತ್ರಾ ರಾಮಕೃಷ್ಣಗೆ ಜಾಮೀನು

ಫೋನ್ ಕದ್ದಾಲಿಕೆ ಪ್ರಕರಣ: ಚಿತ್ರಾ ರಾಮಕೃಷ್ಣಗೆ ಜಾಮೀನು

0

ನವದೆಹಲಿ: ರಾಷ್ಟ್ರೀಯ ಷೇರುಪೇಟೆಯ ಸಿಬ್ಬಂದಿಗಳ ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಗುರುವಾರ, ಎನ್‌’ಎಸ್‌’ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಲಾಗಿದೆ ಎಂದು ಆದೇಶ ಹೊರಡಿಸಿದರು.

ಎನ್‌ಎಸ್‌ಇ ಹಗರಣದಲ್ಲಿ ಈ ಹಿಂದೆ ಸಿಬಿಐಯಿಂದ ಬಂಧನಕ್ಕೊಳಗಾಗಿದ್ದ ಚಿತ್ರಾ ಅವರನ್ನು ಈ ಪ್ರಕರಣದಲ್ಲಿ ಜಾರಿ ನಿರ್ದೇಶಾನಲಯ ಕಳೆದ ವರ್ಷ ಜುಲೈ 14ರಂದು ಬಂಧಿಸಿತ್ತು.ಸಿಬಿಐ ಪ್ರಕರಣದಲ್ಲಿ ಆಕೆಗೆ ಕಳೆದ ವರ್ಷ ಸೆಪ್ಟೆಂಬರ್‌’ನಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ ಷಡ್ಯಂತ್ರದ ಹಿಂದಿನ ಸೂತ್ರಧಾರಿ ಎಂಬ ಕಾರಣಕ್ಕೆ ಆಕೆಯ ಜಾಮೀನು ಅರ್ಜಿಯನ್ನು ಇ.ಡಿ ವಿರೋಧಿಸಿತ್ತು.