ಮನೆ ರಾಜ್ಯ ಸರ್ಕಾರಿ ಕಾರ್ಯಕ್ರಮದ ಪ್ರಶಸ್ತಿ ಪತ್ರದಲ್ಲಿ ಸಚಿವರ ಮಗನ ಚಿತ್ರ: ತೀವ್ರ ಆಕ್ರೋಶ

ಸರ್ಕಾರಿ ಕಾರ್ಯಕ್ರಮದ ಪ್ರಶಸ್ತಿ ಪತ್ರದಲ್ಲಿ ಸಚಿವರ ಮಗನ ಚಿತ್ರ: ತೀವ್ರ ಆಕ್ರೋಶ

0

ಹೊಸಪೇಟೆ (Hospete): ಸರ್ಕಾರಿ ಕಾರ್ಯಕ್ರಮದ ಪ್ರಶಸ್ತಿ ಪತ್ರದಲ್ಲಿ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಅವರ ಮಗ ಸಿದ್ದಾರ್ಥ ಸಿಂಗ್‌ ಅವರ ಭಾವಚಿತ್ರ ಹಾಗೂ ಅವರ ಹೆಸರು ಮುದ್ರಿಸಲಾಗಿದೆ.

ಇದು ತೀವ್ರ ಟೀಕೆಗೆ ಗುರಿಯಾಗಿದೆ. ವಿಜಯನಗರ ಜಿಲ್ಲಾ ಪಂಚಾಯತಿ, ಹೊಸಪೇಟೆ ತಾಲ್ಲೂಕು ಪಂಚಾಯತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಆ. 5 ಮತ್ತು 6ರಂದು ತಾಲ್ಲೂಕಿನ ಪಾಪಿನಾಯಕನಹಳ್ಳಿಯಲ್ಲಿ 48ನೇ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕ್ರೀಡಾಕೂಟದ ಅಂಗವಾಗಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ನೀಡಲಾಗಿದ್ದು, ಅದರಲ್ಲಿ ಸಿದ್ದಾರ್ಥ ಸಿಂಗ್‌ ಅವರ ಕೈಮುಗಿಯುತ್ತಿರುವ ಚಿತ್ರ ಮುದ್ರಿಸಲಾಗಿದೆ.

ಅದರಡಿಯಲ್ಲಿ ಕೊಡುಗೆ ಶ್ರೀ ಸಿದ್ದಾರ್ಥ ಸಿಂಗ್‌, ಯುವ ಮುಖಂಡರು ಹಾಗೂ ಸಮಾಜ ಸೇವಕರು, ವಿಜಯನಗರ ಕ್ಷೇತ್ರ, ಹೊಸಪೇಟೆ ಎಂದು ಬರೆಯಲಾಗಿದೆ.

ಸರ್ಕಾರಿ ಕಾರ್ಯಕ್ರಮದ ಪ್ರಶಸ್ತಿ ಪತ್ರದಲ್ಲಿ ಸಚಿವರ ಮಗನ ಭಾವಚಿತ್ರ ಹಾಕಿರುವ ಕ್ರಮ ಸರಿಯಲ್ಲ. ಸಂಬಂಧಿಸಿದವರು ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ನಗರಸಭೆ ಸದಸ್ಯ ಅಬ್ದುಲ್‌ ಖದೀರ್‌ ಆಗ್ರಹಿಸಿದ್ದಾರೆ.

ಹಿಂದಿನ ಲೇಖನಮಾರಾಟ ಮಹಾಮಂಡಳದಿಂದ ಸಹಕಾರ ಮಹಾಮಂಡಳಕ್ಕೆ 2 ಕೋಟಿ ರೂ. ಹಸ್ತಾಂತರ
ಮುಂದಿನ ಲೇಖನಯುದ್ಧ ಸಾಮರ್ಥ್ಯ ಹೆಚ್ಚಿಸಲು ಸೇನೆಗೆ ಆಧುನಿಕ ಶಸ್ತ್ರಾಸ್ತ್ರಗಳನ್ನು ಹಸ್ತಾಂತರಿಸಿದ ಸಚಿವ ರಾಜನಾಥ್‌ ಸಿಂಗ್‌