ಮನೆ ಮನೆ ಮದ್ದು ಮೊಡವೆ ಗುಳ್ಳೆಗಳು

ಮೊಡವೆ ಗುಳ್ಳೆಗಳು

0

1. ಮೆಣಸನ್ನು ನೀರಿನಲ್ಲಿ ತೇಯ್ದು ಮೊಡವೆಗಳಿಗೆ ಹಚ್ಚುತ್ತಾ ಬಂದರೆ ಕೆಲವೇ ದಿನಗಳಲ್ಲಿ ಮೊಡವೆಗಳು ಮುಖದಲ್ಲಿ ಇಲ್ಲದಂತಾಗುವುದು.

Join Our Whatsapp Group

2. ಕೊತ್ತಂಬರಿ ಸೊಪ್ಪಿನ ರಸದೊಂದಿಗೆ ನಿಂಬೆರಸ ಮಿಶ್ರಣ ಮಾಡಿ,ಕ್ರಮವಾಗಿ ಹೆಚ್ಚುತ್ತಿದ್ದರೆ ಮೊಡವೆ ಹಾಗೂ ಚರ್ಮದ ಮೇಲಿನ ಕಲೆಗಳು ಕಣ್ಮರೆ ಆಗುವುವು.

3. ಬಾದಾಮಿ ಬೀಜವನ್ನು ಶುದ್ಧವಾದ ಹಸಿವಿನ ಹಾಲಿನಲ್ಲಿ ಅರೆದು ಹತ್ತಿಯೊಂದಿಗೆ ಆ ಮಿಶ್ರಣವನ್ನು ಅದ್ದಿ ಮೊಡವೆಯ ಮೇಲೆ ಸವರುತ್ತಿದ್ದರೆ ಮೊಡವೆಯ ಗುರುತು ಮಾಯವಾಗುವುದು.

4. ಸೇಬಿನ ಹಾಗೂ ನಿಂಬೆಯ ಸಿಪ್ಪೆಯನ್ನು ಬಿಸಿಲಿನಲ್ಲಿ ಒಣಗಿಸಿ, ನುಣ್ಣಗೆ ಅರೆದು ಪುಡಿ ಮಾಡಿ,ಚೂರ್ಣವನ್ನು ಹಾಲಿನಲ್ಲಿ ಬೆರೆಸಿ, ಮೊಡವೆಗಳಿಗೆ ಹಚ್ಚಿದರೆ ಮೊಡವೆಯ ಗುಳ್ಳೆ ಕರಗುವುದು.

5. ಸೇಬಿನ ತಿರುಳನ್ನು ಅರೆದು ಮುಖಕ್ಕೆ ಲೇಪಿಸಿಕೊಳ್ಳುವುದರಿಂದ ವಾರದ ಒಳಗಾಗಿ ಮೊಡವೆ ಗುಳ್ಳೆಗಳು ಮಾಯಾ ಆಗುವುವು ಜೊತೆಗೆ ಮುಖ ಕಾಂತಿ ಹೆಚ್ಚುವುದು.

6. ಎಳನೀರಿನಲ್ಲಿ ಕೆಲವು ವಾರ ಮುಖ ತೊಳೆಯುತ್ತಿದ್ದರೆ ಮೊಡವೆಗಳು ಮಾಯವಾಗುತ್ತವೆ ಮುಖದ ಮೇಲೆ ಕಪ್ಪು ಕಲೆಗಳಿದ್ದರೆ ಮಾಯ ಆಗುವುವು ಮುಖದ ಮೇಲೆ ಹೊಳಪು ಹೆಚ್ಚುವುದು.

7. ಕಿತ್ತಲೆ ಸಿಪ್ಪೆಯನ್ನು ಮುಖದ ಮೇಲೆ ಉಜ್ಜುತ್ತಿದ್ದರೆ ಅದರಿಂದ ಸುವಾಸನೆಯ ದ್ರವ ಹೊರಬಂದು, ಮೊಡವೆ ಗುಳ್ಳೆಗಳು ಒಣಗುವುವು.

8. ನಿಂಬೆ ರಸದಲ್ಲಿ ದಾಲ್ಚಿನ್ನಿಯನ್ನು ತೇಯ್ದು, ಮೊಡವೆಗಳಿಗೆ ಹಚ್ಚಿದರೆ   ಬೇಗ ಒಣಗುವವು.

9. ಗರಿಕೆ ಹುಲ್ಲಿನ ರಸವನ್ನು ಮುಖದ ಮೇಲೆ ಲೇಪಿಸುವುದರಿಂದ ಮೊಡವೆಗಳು ಮಾಗುವುವು.

10. ಹಿಂಗನ್ನು ನೀರಿನಲ್ಲಿ ತೇಯ್ದು ಮೊಡವೆಗಳಿಗೆ ಹಚ್ಚುತ್ತಿದ್ದರೂ ಸಹ ಮೊಡವೆ ಗುಳ್ಳೆಗಳು ಮುಖದ ಮೇಲೆ ಕಾಣದಂತಾಗುವವು.