ಮುಂಬೈ : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಇದ್ದ ವಿಮಾನ ಪತನವಾಗಿದೆ. ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ದುರಂತ ಸಂಭವಿಸಿದೆ.
ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬಳಸುತ್ತಿದ್ದ ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಪ್ರಯತ್ನದ ಸಂದರ್ಭದಲ್ಲಿ ಪತನಗೊಂಡು ಹಲವಾರು ಜನರು ಗಾಯಗೊಂಡಿದ್ದಾರೆ. ಅವರು ಇಂದು ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ಬಾರಾಮತಿಗೆ ಹೊರಟಿದ್ದರು.
ವಿಮಾನವು ಧಗಧಗನೆ ಹೊತ್ತಿ ಉರಿದಿದ್ದು, ಸುಟ್ಟು ಕರಕಲಾಗಿದೆ. ವಿಮಾನದಲ್ಲಿದ್ದ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ತುರ್ತು ಲ್ಯಾಂಡಿಂಗ್ ಪ್ರಯತ್ನಕ್ಕೆ ಕಾರಣವೇನು ಎಂಬುದರ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಬಾರಮತಿಗೆ ಅಜಿತ್ ಪವಾರ್ ತೆರಳುತ್ತಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. 3-4 ಮಂದಿ ವಿಮಾನದಲ್ಲಿ ಇದ್ದರು. ಅಜಿತ್ ಪವಾರ್, ಇಬ್ಬರು ಬಾಡಿಗಾರ್ಡ್ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.















