ನವದೆಹಲಿ : ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರ ನಿಧನದಿಂದ ಭಾರತೀಯ ಚಿತ್ರರಂಗದ ಒಂದು ಯುಗ ಅಂತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಧರ್ಮೇಂದ್ರ ಅವರ ನಿಧನದಿಂದ ಭಾರತೀಯ ಚಿತ್ರರಂಗದ ಒಂದು ಯುಗ ಅಂತ್ಯವಾಗಿದೆ.
ಧರ್ಮೇಂದ್ರ ಅವರದ್ದು ಅಪ್ರತಿಮವಾದ ಚಲನಚಿತ್ರ ವ್ಯಕ್ತಿತ್ವ. ಯಾವುದೇ ಪಾತ್ರವಿದ್ದರೂ ಕೂಡ ಆ ಪಾತ್ರದ ಆಳಕ್ಕಿಳಿದು ನಟನೆ ಮಾಡಿ, ಎಲ್ಲರನ್ನು ಮೋಡಿ ಮಾಡುತ್ತಿದ್ದರು. ತಮ್ಮ ವಿಭಿನ್ನ ಪಾತ್ರಗಳ ಮೂಲಕವೇ ಜನರನ್ನು ತಮ್ಮೆಡೆಗೆ ಸೆಳೆದುಕೊಂಡಿದ್ದರು.
ಜೊತೆಗೆ ಅವರ ಸರಳತೆ, ನಮ್ರತೆ ಮತ್ತು ಆತ್ಮೀಯ ಮನೋಭಾವ ಎಲ್ಲರಿಗೂ ಇಷ್ಟವಾಗುವಂತದ್ದು. ಈ ಸಂದರ್ಭದಲ್ಲಿ ಧರ್ಮೇಂದ್ರ ಅವರ ಕುಟುಂಬಸ್ಥರಿಗೆ, ಸ್ನೇಹಿತರಿಗೆ ಹಾಗೂ ಅಭಿಮಾನಿ ವರ್ಗಕ್ಕೆ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ದೇವರಲ್ಲಿ ಪಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.















