ಬೆಂಗಳೂರು(Bengaluru): ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಮೊದಲನೇ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು.
ಮೇಖ್ರಿ ಸರ್ಕಲ್ ವೃತ್ತದ ಎಎಫ್’ಟಿಟಿಸಿ ಹೆಲಿಪ್ಯಾಡ್ನಿಂದ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದ ಪ್ರಧಾನಿ, ಸುಸಜ್ಜಿತವಾಗಿ ನಿರ್ಮಿಸಿದ ಟರ್ಮಿನಲ್–2ಗೆ ಚಾಲನೆ ನೀಡಿದರು.
ಮೊದಲ ಟರ್ಮಿನಲ್ಗಿಂತಲೂ 2ನೇ ಟರ್ಮಿನಲ್ನಲ್ಲಿ ಅತ್ಯಾಧುನಿಕ ವ್ಯವಸ್ಥೆಗಳಿವೆ. ವಿವಿಧ ರೀತಿಯ ಅಲಂಕಾರದಿಂದ ಪ್ರಯಾಣಿಕರನ್ನು ಸೆಳೆಯುತ್ತಿದೆ.ಪ್ರಯಾಣಿಕರಿಗೆ ಪ್ರಕೃತಿ ಸೌಂದರ್ಯದ ಅನುಭವ ನೀಡುವಂತೆ ಟರ್ಮಿನಲ್ 2 ಅನ್ನು ವಿನ್ಯಾಸ ಮಾಡಲಾಗಿದೆ.
ಪ್ರಯಾಣಿಕರು ವಿಶ್ರಾಂತಿ ಪಡೆಯುವ ಸ್ಥಳದಲ್ಲಿ ಉದ್ಯಾನ ನಿರ್ಮಿಸಲಾಗಿದೆ. ಹೊಸ ಟರ್ಮಿನಲ್ನಲ್ಲಿ ಪ್ರಯಾಣಿಕರು ಸಾಗುವಾಗ ಉದ್ಯಾನದಲ್ಲಿ ನಡೆದಾಡಿದ ಅನುಭವ ಸಿಗಲಿದೆ. ಡಿಜಿಟಲ್ ವ್ಯವಸ್ಥೆಯ ಮೂಲಕ ರಾಜ್ಯದ ಜಲಮೂಲಗಳು, ನೈಸರ್ಗಿಕ ಕಾಡು ತೋರಿಸಲು ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರಿಗೆ ಪುಟ್ಟ ಕಾಡಿನಲ್ಲಿದ್ದ ಅನುಭವ ಸಿಗುವಂತೆ ಕಟ್ಟಡ ವಿನ್ಯಾಸಗೊಂಡಿದೆ.
2008ರಲ್ಲಿ ಕಾರ್ಯಾಚರಣೆ ಆರಂಭಿಸಿದ ಈ ವಿಮಾನ ನಿಲ್ದಾಣವು ದಕ್ಷಿಣ ಭಾರತದ ಅತ್ಯಂತ ದಟ್ಟಣೆ ವಿಮಾನ ನಿಲ್ದಾಣವಾಗಿ ಬೆಳೆದಿದೆ. ಈ ದಟ್ಟಣೆ ನಿಯಂತ್ರಣ ಉದ್ದೇಶದಿಂದ ವಿಸ್ತರಣೆ ಮಾಡಲಾಗಿದೆ..














