ಮನೆ ಉದ್ಯೋಗ ಒಂದೂವರೆ ವರ್ಷದಲ್ಲಿ 10 ಲಕ್ಷ ಹುದ್ದೆಗಳ ಭರ್ತಿಗೆ ಪ್ರಧಾನಿ ಮೋದಿ ಸೂಚನೆ

ಒಂದೂವರೆ ವರ್ಷದಲ್ಲಿ 10 ಲಕ್ಷ ಹುದ್ದೆಗಳ ಭರ್ತಿಗೆ ಪ್ರಧಾನಿ ಮೋದಿ ಸೂಚನೆ

0

ನವದೆಹಲಿ(New Delhi) : ಉದ್ಯೋಗಾಕಾಂಕ್ಷಿಗಳಿಗೆ ಪ್ರಧಾನಿ ಮೋದಿ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಒಂದೂವರೆ ವರ್ಷದಲ್ಲಿ 10 ಲಕ್ಷ ಹುದ್ದೆಗಳ ಭರ್ತಿಗೆ ಸೂಚನೆ ನೀಡಲಾಗಿದೆ.

ಮಂಗಳವಾರ ಪ್ರಧಾನ ಮಂತ್ರಿ ಕಚೇರಿ ಈ ಬಗ್ಗೆ ಟ್ವೀಟ್‌ ಮಾಡಿದೆ. ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಗತಿಯ ಪರಾಮರ್ಶೆ ನಡೆಸಿದ ಬಳಿಕ ಮೋದಿ ಅವರು ಈ ನಿರ್ದೇಶನ ನೀಡಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ತಿಳಿಸಿದೆ.

ಕೇಂದ್ರ ಸರ್ಕಾರದ  ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಪರಿಸ್ಥಿತಿಯನ್ನು ಪರಿಶೀಲಿಸಿ  ಮುಂದಿನ 18 ತಿಂಗಳಿನಲ್ಲಿ ಕೇಂದ್ರದ ವಿವಿಧ ಇಲಾಖೆಗಳಲ್ಲಿ 10 ಲಕ್ಷ ಹುದ್ಧೆಗಳ ಭರ್ತಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಜನರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಮೋದಿ ಸರ್ಕಾರ ದೊಡ್ಡ ಹೆಜ್ಜೆ ಇಡಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಮುಂದಿನ ಒಂದೂವರೆ ವರ್ಷದಲ್ಲಿ ಮೋದಿ ಸರ್ಕಾರ 10 ಲಕ್ಷ ಉದ್ಯೋಗಗಳನ್ನು ಒದಗಿಸಲಿದೆ ಎಂದು ಪ್ರಧಾನಿ ಕಚೇರಿಯ ಟ್ವೀಟ್ ನಲ್ಲಿ  ತಿಳಿಸಿದೆ.