ಮನೆ ರಾಜಕೀಯ ನಾಡಹಬ್ಬ ದಸರಾಗೆ ಪ್ರಧಾನಿ ಮೋದಿ ಆಗಮಿಸುತ್ತಿಲ್ಲ: ಸಿಎಂ ಬೊಮ್ಮಾಯಿ

ನಾಡಹಬ್ಬ ದಸರಾಗೆ ಪ್ರಧಾನಿ ಮೋದಿ ಆಗಮಿಸುತ್ತಿಲ್ಲ: ಸಿಎಂ ಬೊಮ್ಮಾಯಿ

0

ಕಲಬುರಗಿ(Kalburgi): ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬರುವ ವಿಚಾರ ಚರ್ಚೆಯಲ್ಲಿತ್ತು.  ಆದರೆ ಮೋದಿ ಆಗಮಿಸಲು ಸಾಧ್ಯವಿಲ್ಲವೆಂದು ಸಂದೇಶ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ 2022 ಉತ್ಸವದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಮಾಜಿ ಸಿಎಂ ಬಿ ಎಸ್ ಯಡಿಯುರಪ್ಪ ವಿರುದ್ಧ ಮತ್ತೆ ಎಫ್ಐಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಅವರ ವಿರುದ್ಧ ಈ ಹಿಂದೆ ಇಂತಹ ಹಲವು ಕೇಸ್​ಗಳು ದಾಖಲಾಗಿ ವಿಫಲಗೊಂಡಿವೆ. ಅದರಂತೆ ಈ‌ ಕೇಸ್ ಕೂಡಾ ವಿಫಲವಾಗಲಿದೆ ಎಂದು ಹೇಳಿದರು.

ಬಿಎಸ್‌ವೈ ತಮ್ಮ ಅಧಿಕಾರ ಅವಧಿಯಲ್ಲಿ ಬಿಡಿಎ ವಸತಿ ಯೋಜನೆ ಗುತ್ತಿಗೆ ನೀಡುವಾಗ ಕೋಟ್ಯಾಂತರ ರೂಪಾಯಿ ಹಣ ಪಡೆದಿದ್ದಾರೆಂಬ ಆರೋಪ‌ ಇದೆ. ಇದಕ್ಕೆ ಸಂಬಂಧಿಸಿದಂತೆ ಸದ್ಯ‌ ಲೋಕಾಯುಕ್ತದಲ್ಲಿ ಯಡಿಯೂರಪ್ಪ ವಿರುದ್ಧ ಎಫ್ಐಆರ್​ ದಾಖಲಾಗಿದೆ. ಈ ಹಿಂದೆ ಇಂತಹ ಹಲವು ಪ್ರಕರಣಗಳು ದಾಖಲಾಗಿ ವಿಫಲಗೊಂಡಿವೆ. ಅದರಂತೆ ಇದು ಕೂಡಾ ಒಂದು. ಯಡಿಯೂರಪ್ಪ ಇದರಲ್ಲಿಯೂ ಆರೋಪ ಮುಕ್ತರಾಗ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ನಡೆದ ದುರ್ಘಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ,  ದುರ್ಘಟನೆಯಿಂದ ನಮ್ಮ‌ ಮನಸಿಗೂ ನೋವಾಗಿದೆ. ಈ ಬಗ್ಗೆ ತನಿಖೆ ಕೂಡಾ ನಡೆದಿದೆ. ವರದಿ ಬಂದ ನಂತರ ಕ್ರಮ‌ ಕೈಗೊಳ್ಳಲಾಗುವುದು ಎಂದರು.

ಮಳೆಯ ಅವಾಂತರ ಬಗ್ಗೆ ಮಾತನಾಡಿ, ಇಡೀ ಕರ್ನಾಟಕದಲ್ಲಿ ಹೆಚ್ಚಿನ ಮಳೆಯಾಗಿದೆ. ಬೆಳೆ ಹಾನಿಗೆ ಪರಿಹಾರ ಬಿಡುಗಡೆ ಮಾಡಲಾಗಿದೆ. ಹಾನಿಗಿಂತ ದುಪ್ಪಟ್ಟು ಬೆಳೆ ಪರಿಹಾರ ರೈತರಿಗೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಹಿಂದಿನ ಲೇಖನಕೆಪಿಟಿಸಿಎಲ್ ನೇಮಕಾತಿ ಅಕ್ರಮ: ಮತ್ತೆ ಮೂವರು ಆರೋಪಿಗಳ ಬಂಧನ
ಮುಂದಿನ ಲೇಖನಕೇಂದ್ರದ ಮಾಜಿ ಸಚಿವ ಮಾಣಿಕ್‌ರಾವ್‌ ಗವಿತ್ ನಿಧನ