ಬೆಂಗಳೂರು(Bengaluru): ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜೊತೆ ಪ್ರತ್ಯೇಕವಾಗಿ ಚರ್ಚೆ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಯಡಿಯೂರಪ್ಪ ಅವರೊಂದಿಗೆ ಪ್ರಧಾನಿ ಮೋದಿ ಸುಮಾರು 15 ನಿಮಿಷಗಳ ಕಾಲ ಪ್ರತ್ಯೇಕವಾಗಿ ಮಾಕುತೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಭಾಗವಹಿಸಿರುವ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ನರೇಂದ್ರ ಮೋದಿ ಕೆಲ ಹೊತ್ತು ಪ್ರತ್ಯೇಕ ಚರ್ಚೆ ನಡೆಸಿದ್ದಾರೆ. ಈ ವೇಳೆ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಸೇರಿದಂತೆ ಕೆಲವು ಕಾರ್ಯಕ್ರಮಗಳಿಗೆ ಪಿಎಂ ಅವರನ್ನು ಆಹ್ವಾನಿಸಿದ್ದಾರೆ ಎನ್ನಲಾಗಿದೆ.
ಕರ್ನಾಟಕವು ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿದ್ದು, ಈ ವೇಳೆ ಬಿಎಸ್ ಯಡಿಯೂರಪ್ಪ ಅವರ ಜೊತೆಗಿನ ಮೋದಿ ಮಾತುಕತೆ ಮಹತ್ವ ಪಡೆದಿದೆ.
ಸಿಎಂ ವರದಿ: ಕಾರ್ಯಕಾರಣಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯದ ಬಗ್ಗೆ ವರದಿ ನೀಡಿದ್ದಾರೆ ಎನ್ನಲಾಗಿದೆ. ರಾಜಕೀಯ ಸ್ಥಿತಿಗತಿ, ಚುನಾವಣಾ ಪ್ರಚಾರದ ಮುಂತಾದ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ.