ಮನೆ ರಾಷ್ಟ್ರೀಯ ಮೊರ್ಬಿ ತೂಗು ಸೇತುವೆ ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ: ರಕ್ಷಣಾ ಕಾರ್ಯಾಚರಣೆ ವೀಕ್ಷಣೆ

ಮೊರ್ಬಿ ತೂಗು ಸೇತುವೆ ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ: ರಕ್ಷಣಾ ಕಾರ್ಯಾಚರಣೆ ವೀಕ್ಷಣೆ

0

ಮೊರ್ಬಿ: ತೂಗು ಸೇತುವೆ ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭೇಟಿ ನೀಡಿ, ಶೋಧ ಮತ್ತು ರಕ್ಷಣಾ ಕಾರ್ಯಚರಣೆಯನ್ನು ವೀಕ್ಷಿಸಿದರು.

ಇದಕ್ಕೂ ಮುನ್ನ ಮೊದಲು ಪ್ರಧಾನಿ ಮೋದಿ ಅವರು ವೈಮಾನಿಕ ವೀಕ್ಷಣೆ ಮಾಡಿದರು. ಬಳಿಕ ದರ್ಬಾರ್‌’ಗಢ ಪ್ಯಾಲೆಸ್‌ ಮೂಲಕ ದುರಂತ ನಡೆದ ಸ್ಥಳಕ್ಕೆ ಆಗಮಿಸಿದರು. ಅಧಿಕಾರಿಗಳು ದುರ್ಘಟನೆಗೆ ಕಾರಣ ಏನಾಗಿರಬಹುದು ಎಂಬ ಮಾಹಿತಿ ನೀಡಿದರು.

ನಂತರ ಮೊರ್ಬಿ ಸಿವಿಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರು ಮಂದಿ ಗಾಯಾಳುಗಳನ್ನು ಭೇಟಿ ಮಾಡಿದರು. ಸೇತುವೆಯ ಒಂದು ತುದಿ ದರ್ಬಾರ್‌ ಗಢ ಪ್ಯಾಲೇಸ್‌ ಅನ್ನು ಸಂಪರ್ಕಿಸಿದರೆ, ಮತ್ತೊಂದು ತುದಿ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಮಾರ್ಗವಾಗಿದೆ.

ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಶತಮಾನದಷ್ಟು ಹಳೆಯ ತೂಗುಸೇತುವೆ ಇದಾಗಿದೆ. ಸುಮಾರು 230 ಮೀಟರ್‌ ಉದ್ದದ ಈ ಸೇತುವೆಯನ್ನು 19ನೇ ಶತಮಾನದಲ್ಲಿ ನಿರ್ಮಿಸಲಾಗಿದೆ. ಭಾನುವಾರ ಭಾರಿ ಸಂಖ್ಯೆಯ ಪ್ರವಾಸಿಗರು ಸೇತುವೆ ಮೇಲೆ ಜಮಾಯಿಸಿದ್ದರಿಂದ ಮುರಿದು ಬಿದ್ದು 135 ಮಂದಿ ಮೃತಪಟ್ಟಿದ್ದಾರೆ.