ಮನೆ ರಾಷ್ಟ್ರೀಯ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ

ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ

0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ  ಸಲ್ಲಿಸಿದ್ದಾರೆ.

140 ಕೋಟಿ ಭಾರತೀಯರಿಗೆ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿರುವುದಾಗಿ ಮೋದಿ ಸಾಮಾಜಿಕ ಜಾಲತಾಣ ಎಕ್ಸ್’​ನಲ್ಲಿ ಫೋಟೋಸಮೇತ ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಧಾನಿ ಮೋದಿ ಕಳೆದ ರಾತ್ರಿ ತಿರುಮಲದಲ್ಲಿ ತಂಗಿದ್ದರು. ಇಂದು ದೇವರ ದರ್ಶನ ಪಡೆದ ಅವರು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡರು.

ಇದಕ್ಕೂ ಮುನ್ನ, ಭಾನುವಾರ ತಿರುಪತಿ ವಿಮಾನ ನಿಲ್ದಾಣದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಮತ್ತು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಆಗಮಿಸಿದ್ದರು. ಅಬ್ದುಲ್ ನಜೀರ್ ಅವರು ಪ್ರಧಾನಿ ಮೋದಿಯವರೊಂದಿಗೆ ತಿರುಮಲಕ್ಕೆ ತೆರಳಿದ್ದರು. ಮುಖ್ಯಮಂತ್ರಿ ಜಗನ್ ನಂತರ ವಿಜಯವಾಡಕ್ಕೆ ಹಿಂತಿರುಗಿದ್ದರು.

ಉಪ ಮುಖ್ಯಮಂತ್ರಿ ಕೆ.ನಾರಾಯಣಸ್ವಾಮಿ, ವಿದ್ಯುತ್ ಖಾತೆ ಸಚಿವ ಪೆದ್ದಿರೆಡ್ಡಿ ರಾಮಚಂದ್ರರೆಡ್ಡಿ, ಟಿಟಿಡಿ ಟ್ರಸ್ಟ್ ಬೋರ್ಡ್ ಅಧ್ಯಕ್ಷ ಬಿ.ಕರುಣಾಕರ್ ರೆಡ್ಡಿ, ಸಂಸದ ಪಿ.ವಿ.ಮಿಧುನ್ ರೆಡ್ಡಿ (ರಾಜಂಪೇಟೆ), ಎಂ.ಗುರುಮೂರ್ತಿ (ತಿರುಪತಿ) ಹಾಗೂ ಎನ್.ರೆಡ್ಡೆಪ್ಪ (ಚಿತ್ತೂರು), ರಾಜ್ಯಸಭಾ ಸದಸ್ಯ ಜಿ.ವಿ.ಎಲ್.ನರಸಿಂಹ ರಾವ್, ಸರ್ಕಾರಿ ಸಚೇತಕ ಚೇವಿರೆಡ್ಡಿ ಭಾಸ್ಕರ್ ರೆಡ್ಡಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು.

ಹಿಂದಿನ ಲೇಖನಐವರ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ
ಮುಂದಿನ ಲೇಖನ‘ಕಾಂತಾರ ಚಾಪ್ಟರ್ 1’ ಚಿತ್ರದ ಮೊದಲ ಪೋಸ್ಟರ್ ಅನಾವರಣ