ನವದೆಹಲಿ : ನೇಪಾಳದ ಹಂಗಾಮಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಅಭಿನಂದನೆ ಸಲ್ಲಿಸಿದ ಅವರು, ನೇಪಾಳದ ಮಧ್ಯಂತರ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಸುಶೀಲಾ ಕರ್ಕಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನೇಪಾಳದ ಸಹೋದರ, ಸಹೋದರಿಯರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗೆ ಭಾರತ ಸಂಪೂರ್ಣವಾಗಿ ಬದ್ಧವಾಗಿದೆ ಎಂದಿದ್ದಾರೆ.
ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ಮಧ್ಯಂತರ ಪ್ರಧಾನಿಯಾಗಿ ಶುಕ್ರವಾರ ರಾತ್ರಿ ಪ್ರಮಾಣ ವಚನ ಸ್ವೀಕರಿಸಿದರು. ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು ಕರ್ಕಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.















