ಮನೆ ದೇಶ ಶಾಸಕ ಜಿ.ಟಿ.ದೇವೇಗೌಡರ ಮೊಮ್ಮಗಳ ನಿಧನಕ್ಕೆ ಪ್ರಧಾನಿ ಮೋದಿ ಸಾಂತ್ವಾನ

ಶಾಸಕ ಜಿ.ಟಿ.ದೇವೇಗೌಡರ ಮೊಮ್ಮಗಳ ನಿಧನಕ್ಕೆ ಪ್ರಧಾನಿ ಮೋದಿ ಸಾಂತ್ವಾನ

0

ಮೈಸೂರು(Mysuru) : ಶಾಸಕ ಜಿಟಿ ದೇವೇಗೌಡ ಮೊಮ್ಮಗಳು ಗೌರಿ ವಿಧಿವಶರಾದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪತ್ರದ ಮೂಲಕ ಜಿಟಿ ದೇವೇಗೌಡರಿಗೆ ಸಾಂತ್ವಾನ ಹೇಳಿದ್ದಾರೆ.

ಪತ್ರದಲ್ಲಿ ಮೋದಿ ಅವರು, ನಿಮ್ಮ ಮೊಮ್ಮಗಳು ಗೌರಿ ಅವರ ನಿಧನದ ಬಗ್ಗೆ ತಿಳಿದು ನನಗೆ ಆಘಾತವಾಗಿದೆ ಮತ್ತು ತೀವ್ರ ನೋವಾಗಿದೆ. ಇಷ್ಟು ಇಳಿವಯಸ್ಸಿನಲ್ಲಿ ಆಕೆ ಇಹಲೋಕ ತ್ಯಜಿಸಿದ್ದಾಳೆ ಎಂದರೆ ನಂಬುವುದು ಅಸಾಧ್ಯ. ತೀವ್ರ ದುಃಖದ ಈ ಸಮಯದಲ್ಲಿ ನನ್ನ ಹೃತ್ಪೂರ್ವಕ ಸಂತಾಪಗಳು. ಅಂತಹ ಚಿಕ್ಕ ವಯಸ್ಸಿನಲ್ಲಿ ಮಗುವಿನ ನಷ್ಟವು ಪೋಷಕರಿಗೆ ಮತ್ತು ಅಜ್ಜನಾದ ನಿಮಗೆ ಅತ್ಯಂತ ಕಷ್ಟಕರ ಸಮಯವಾಗಿದೆ,  ನಿಮ್ಮ ಕುಟುಂಬಕ್ಕೆ ಆದ ನಷ್ಟ ಪದಗಳಿಗೆ ಮೀರಿದೆ. ಗೌರಿ ಬಿಟ್ಟು ಹೋಗಿರುವ ನೆನಪುಗಳು ಕುಟುಂಬಕ್ಕೆ ಸಾಂತ್ವನ ನೀಡಲಿ. ಈ ತುಂಬಲಾರದ ನಷ್ಟವನ್ನು ಭರಿಸುವ ಶಕ್ತಿಯನ್ನು ಕುಟುಂಬದ ಸದಸ್ಯರಿಗೆ ಮತ್ತು ಹಿತೈಷಿಗಳಿಗೆ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಾಂತ್ವಾನ ಹೇಳಿದ್ದಾರೆ.