ಚಾಮರಾಜನಗರ: ಪ್ರಧಾನಿ ಮೋದಿ ಅವರು ಇದೇ 9ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 6ರಿಂದ 9ರವರೆಗೆ ಬಂಡೀಪುರದಲ್ಲಿ ಸಫಾರಿ ಬಂದ್ ಆಗಲಿದೆ.
ಮಾತ್ರವಲ್ಲದೇ, ಗುರುವಾರದಿಂದ 9ರವರೆಗೆ ಬಂಡೀಪುರ ವ್ಯಾಪ್ತಿಯ ಎಲ್ಲ ಹೋಂ ಸ್ಟೇಗಳು, ರೆಸಾರ್ಟ್ ಗಳು ಮತ್ತು ಲಾಡ್ಜ್ ಗಳು ಬಂದ್ ಆಗಲಿವೆ.
ಪ್ರಧಾನಿಯವರ ಭದ್ರತೆ, ರಸ್ತೆ ನಿರ್ವಹಣೆ ಹಾಗೂ ಭೇಟಿಯ ಪೂರ್ವ ಸಿದ್ಧತೆ ಕೈಗೊಳ್ಳಬೇಕಾಗಿರುವುದರಿಂದ ಸಫಾರಿಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ, ಹೋಂ ಸ್ಟೇ, ರೆಸಾರ್ಟ್ ಗಳು ಹಾಗೂ ಲಾಡ್ಜ್ ಗಳ ಕಾಯ್ದಿರಿಸುವಿಕೆ, ತಂಗುವಿಕೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಆದೇಶ ಹೊರಡಿಸಿದ್ದಾರೆ.
ಈ ಮಧ್ಯೆ, ಪ್ರಧಾನಿಯವರ ಭದ್ರತೆ ಹೊಣೆ ಹೊತ್ತಿರುವ ಎಸ್ ಪಿ ಜಿ ತಂಡ ಗುಂಡ್ಲುಪೇಟೆಗೆ ಬಂದಿದೆ.
Saval TV on YouTube