ಮನೆ ರಾಜಕೀಯ ಬಸವ ಜಯಂತಿ: ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ

ಬಸವ ಜಯಂತಿ: ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ

0

ಬೆಂಗಳೂರು(Bengaluru): ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಬಸವ ಜಯಂತಿಯಂದು ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ.

ಬಸವ ಜಯಂತಿಯ ಈ ಶುಭಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ ನಮನಗಳು. ಬಸವಣ್ಣನವರ ಚಿಂತನೆ, ಬೋಧನೆ ಹಾಗು ತತ್ವಾದರ್ಶಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಶಕ್ತಿ ತುಂಬುತ್ತಿದೆ. ಜಗಜ್ಯೋತಿ ಬಸವೇಶ್ವರರ ಕುರಿತು 2020ರಲ್ಲಿ ನಾನು ಮಾಡಿದ ಭಾಷಣವನ್ನು ಹಂಚಿಕೊಳ್ಳುತ್ತಿರುವೆ ಎಂದು ಮೋದಿ ವಿಡಿಯೊ ಸಹಿತ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ  ಕೂಡ ಕನ್ನಡದಲ್ಲೇ ಟ್ವೀಟ್ ಮಾಡಿದ್ದು,  ಸರ್ವರಿಗೂ ಕಾಯಕಯೋಗಿ ಬಸವಣ್ಣನವರ ಜಯಂತಿಯ ಶುಭಾಶಯಗಳು. 12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ಅನುಭವ ಮಂಟಪದ ಮೂಲಕ ಜಗತ್ತಿಗೆ ಪ್ರಜಾಪ್ರಭುತ್ವದ ಕಲ್ಪನೆ ನೀಡಿದ ವಿಶ್ವಗುರು, ಮಹಾ ಮಾನವತಾವಾದಿ ಅಣ್ಣ ಬಸವಣ್ಣನವರ ಬದುಕು, ತತ್ವ, ವಚನ ಸಂದೇಶ ನಮ್ಮೆಲ್ಲರ ಜೀವನಕ್ಕೆ ಪ್ರೇರಣೆ ಆಗಲಿ ಎಂದು  ಹೇಳಿದ್ದಾರೆ.

ಹಿಂದಿನ ಲೇಖನಅಮಿತ್ ಶಾ ಸಮ್ಮುಖದಲ್ಲಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ
ಮುಂದಿನ ಲೇಖನಒದಗಿ ಬರುವ ಅವಕಾಶವನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಿ: ಪಿಡಿಓ ಶೋಭಾರಾಣಿ