ಮೈಸೂರು: ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಅಂಗವಿಕಲ ಬಾಲಕಿಯನ್ನು ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಜಯರಾಮ ಎಂಬ ವ್ಯಕ್ತಿಗೆ ಇಲ್ಲಿನ ಎಫ್ ಟಿಎಸ್ ಸಿ ನ್ಯಾಯಾಲಯವು 25 ವರ್ಷ ಕಠಿಣ ಶಿಕ್ಷೆ ಹಾಗೂ 1.05 ಲಕ್ಷ ರೂ. ದಂಡ ವಿಧಿಸಿದೆ.
ತಾಲ್ಲೂಕಿನ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2022ರಲ್ಲಿ ಪ್ರಕರಣ ನಡೆದಿತ್ತು. ‘ಬಾಲಕಿಗೆ ಮಾತನಾಡಲು ಬರುತ್ತಿರಲಿಲ್ಲ. ಯಾರೂ ಇಲ್ಲದ ವೇಳೆ ಬಂದ ಜಯರಾಮ ನೀರು ಕೇಳಿ, ಮನೆಗೆ ನುಗ್ಗಿ ಅತ್ಯಾಚಾರ ನಡೆಸಿದ್ದಾನೆ’ ಎಂದು ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಧೀಶರಾದ ಶೈಮಾ ಖಮ್ರೋಜ್ ಪ್ರಕರಣದ ವಿಚಾರಣೆ ನಡೆಸಿ, ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ. ದಂಡದ ಮೊತ್ತದಲ್ಲಿ ಸಂತ್ರಸ್ತ ಬಾಲಕಿಗೆ ₹75 ಸಾವಿರ ನೀಡಬೇಕು, ಸರ್ಕಾರದಿಂದ ₹5 ಲಕ್ಷ ಪರಿಹಾರಧನಕ್ಕೆ ಆಕೆ ಅರ್ಹಳು ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. ಸರ್ಕಾರಿ ಅಭಿಯೋಜಕಿ ಕೆ.ಬಿ.ಜಯಂತಿ ವಾದಿಸಿದ್ದರು.
Saval TV on YouTube