ಮನೆ ಅಪರಾಧ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ : ಷರತ್ತು ಸಡಿಲಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ

ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ : ಷರತ್ತು ಸಡಿಲಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ

0

ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಷರತ್ತು ಸಡಿಲಿಸಿ ಎಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ಹೈಕೋರ್ಟ್ ಷರತ್ತು ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಷರತ್ತು ಸಡಿಲಿಸಿ ಕೋರಿ ಹೈಕೋರ್ಟಿಗೆ ಬಿಎಸ್ ಯಡಿಯೂರಪ್ಪ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.

ಬಿಎಸ್ ಯಡಿಯೂರಪ್ಪ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್ ಪಿ ಪಿ ಕಾಲಾವಕಾಶ ಕೋರಿದ್ದಾರೆ. ಈಗಾಗಲೇ ಬಿಎಸ್ ಯಡಿಯೂರಪ್ಪ ಅವರು ಕೋರ್ಟ್ ಷರತ್ತು ಉಲ್ಲಂಘಿಸಿದ್ದಾರೆ. ಕೋರ್ಟ್ ಅನುಮತಿ ಪಡೆಯದೆ ವ್ಯಾಪ್ತಿ ಬಿಟ್ಟು ಪ್ರಯಾಣಿಸಿದ್ದಾರೆ ಎಂದು ಹೈಕೋರ್ಟ್ ಗೆ ಎಸ್‌ಪಿಪಿ ಅಶೋಕ್ ನಾಯಕ್ ಹೇಳಿಕೆ ನೀಡಿದರು. ಈಗಾಗಲೇ ಕೇಸ್ ಸಂಬಂಧ ತಡೆಯಾಜ್ಞೆ ಇರುವ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿ ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ಹೊರಡಿಸಿತು.

ಅಲ್ಲದೇ ಕಳೆದ ಮಾರ್ಚ್ 14 ರಂದು ಪೋಕ್ಸೋ ಕೇಸ್’ ನಲ್ಲಿ ಮಾಜಿ ಸಿಎಂ B.S ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.ಅದೇ ರೀತಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಖುದ್ದು ಹಾಜರಾತಿಗೂ ಹೈಕೋರ್ಟ್ ತಡೆ ನೀಡಿದೆ.