ತುಮಕೂರು: ಪೋಕ್ಸೊ ಕೇಸ್ ನಡಿ ಜಿಲ್ಲೆಯ ಕುಣಿಗಲ್ ತಾಲೂಕಿನ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷ ಬಾಲಮಂಜುನಾಥ ಸ್ವಾಮೀಜಿ ಹಾಗೂ ಆಪ್ತ ಸಹಾಯಕ ಅಭಿಲಾಷ್ ನನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ.
ಪೊಲೀಸರ ಪರಿಶೀಲನೆ ವೇಳೆ ಸ್ವಾಮೀಜಿಯ ಅಸಲಿ ಮುಖವಾಡ ಬಯಲಾಗಿದ್ದು, ತುಮಕೂರು ಎಸ್ ಪಿ ಅಶೋಕ್ ಕೆ.ವಿ. ನೇತೃತ್ವದಲ್ಲಿ ಬಾಲಮಂಜುನಾಥ ಸ್ವಾಮೀಜಿ, ಅಭಿಲಾಷ್ ವಿರುದ್ಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.
ರ್ಮ ರೋಗಕ್ಕೆ ಚಿಕಿತ್ಸೆ ಕೊಡುವ ನೆಪದಲ್ಲಿ ನನ್ನ ಬೆತ್ತಲೆ ವಿಡಿಯೋ ಮಾಡಿಕೊಂಡು, ನನ್ನನ್ನು ಬೆದರಿಸಿ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆಂದು ಕಳೆದ ಫೆಬ್ರವರಿ 10 ರಂದು ತುಮಕೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ದೂರು ದಾಖಲಿಸಿದ್ದರು. ಇದೇ ಘಟನೆ ಸಂಬಂಧ ಸ್ವಾಮೀಜಿಯ ಆಪ್ತ ಸಹಾಯಕ ಅಭಿಲಾಷ್ ಎಂಬಾತ ಎಫ್ಐಆರ್ ದಾಖಲಿಸಿದ್ದ. ಬೆದರಿಕೆ ಹಾಕಿ ಹಣಕ್ಕೆ ಡಿಮ್ಯಾಂಡ್ ಮಾಡಲಾಗಿದೆ ಎಂದು ಸ್ವಾಮೀಜಿಯ ಸೇವಕ ಅಭಿಷೇಕ್ ಆ್ಯಂಡ್ ಟೀಂ ಒಟ್ಟು 6 ಜನರ ಮೇಲೆ ದೂರು ನೀಡಿದ್ದರು. ಈ ಪ್ರಕರಣ ಬೆನ್ನಲ್ಲೇ ಸ್ವಾಮೀಜಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಮಠದಲ್ಲೇ ಅಪ್ರಾಪ್ತ ಬಾಲಕಿಗೆ ಸ್ವಾಮೀಜಿ ಲೈಂಗಿಕ ಕಿರುಕುಳ ಕೊಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಅಭಿಷೇಕ್ ಕೊಟ್ಟ ಮಾಹಿತಿ ಮೇರೆಗೆ ತಡರಾತ್ರಿ ಮಠಕ್ಕೆ ತೆರಳಿ ಪರಿಶೀಲನೆ ನಡೆಸಿದ ಪೊಲೀಸರು ಪರಿಶೀಲನೆ ವೇಳೆ ಸ್ವಾಮೀಜಿಯ ಅಸಲಿ ಮುಖವಾಡ ಬಯಲು ಮಾಡಿದ್ದಾರೆ. ಸದ್ಯ ಬಾಲಮಂಜುನಾಥ್ ಸ್ವಾಮೀಜಿ ಹಾಗೂ ಆತನ ಆಪ್ತ ಸಹಾಯಕ ಅಭಿಲಾಷ್ ವಿರುದ್ಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ತಡರಾತ್ರಿ ಇಬ್ಬರನ್ನೂ ಬಂಧಿಸಲಾಗಿದೆ. ಪೊಲೀಸರಿಂದ ತನಿಖೆ ಮುಂದುವರಿದಿದೆ.
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
ನಾಡಪ್ರಭು ಕೆಂಪೇಗೌಡ ಜಯಂತಿ, ಪ್ರಯುಕ್ತ 2000 ಹೋಳಿಗೆ ಹಂಚಿಕೆ !
FCI ಹುದ್ದೆಗೆ ಆನ್’ಲೈನ್’ನಲ್ಲಿ ಅರ್ಜಿ ಸಲ್ಲಿಸಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.