ಮನೆ ಕಾನೂನು ಪೋಕ್ಸೊ ಪ್ರಕರಣ: ಯಡಿಯೂರಪ್ಪ ಅವರಿಗೆ ಸಿಐಡಿ ನೋಟಿಸ್ ಜಾರಿ

ಪೋಕ್ಸೊ ಪ್ರಕರಣ: ಯಡಿಯೂರಪ್ಪ ಅವರಿಗೆ ಸಿಐಡಿ ನೋಟಿಸ್ ಜಾರಿ

0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸಿಐಡಿ ಪೋಕ್ಸೊ ಪ್ರಕರಣದಲ್ಲಿ ವಿಚಾರಣೆಗೆ ಕರೆಸಿದೆ ಎಂದು ಮೂಲಗಳು ಬುಧವಾರ ಬಹಿರಂಗಪಡಿಸಿವೆ.

Join Our Whatsapp Group

ಫೆಬ್ರವರಿಯಲ್ಲಿ ನಡೆದ ಸಭೆಯೊಂದರಲ್ಲಿ 17 ವರ್ಷದ ಬಾಲಕಿಯ ಮೇಲೆ   ಯಡಿಯೂರಪ್ಪಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು, ಈ ಆರೋಪವನ್ನು ಮಾಜಿ ಮುಖ್ಯಮಂತ್ರಿ  ಕಟುವಾಗಿ ನಿರಾಕರಿಸಿದ್ದರು.

ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಇತ್ತೀಚೆಗೆ ದೂರುದಾರರು ಶ್ವಾಸಕೋಶದ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದರಿಂದ ಪ್ರಕರಣದ ತನಿಖೆ ತೀವ್ರಗೊಂಡಿದೆ. ಯಡಿಯೂರಪ್ಪ ಅವರು ಈ ಆರೋಪವನ್ನು ಕಾನೂನಾತ್ಮಕವಾಗಿ ಎದುರಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಹಿಂದಿನ ಲೇಖನಕುವೈತ್: ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ- 4 ಭಾರತೀಯರು ಸೇರಿ 35 ಮಂದಿ ಸಾವು
ಮುಂದಿನ ಲೇಖನ4ನೇ ಬಾರಿ ಆಂಧ್ರ CM ಆಗಿ ಪ್ರಮಾಣವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು:ಮೋದಿ ಭಾಗಿ