ಮನೆ ಸುದ್ದಿ ಜಾಲ ಕವಿ ಡಾ. ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಏರುಪೇರು

ಕವಿ ಡಾ. ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಏರುಪೇರು

0

ಧಾರವಾಡ: ಹೆಸರಾಂತ ಹಿರಿಯ ಕವಿ ಡಾ. ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಉಂಟಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಎಸ್ ಡಿಎಂ ಆಸ್ಪತ್ರೆ ಬುಧವಾರ ಬೆಳಿಗ್ಗೆ ತನ್ನ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ.

ಜ್ವರದಿಂದ ಬಳಲುತ್ತಿದ್ದ ಡಾ. ಕಣವಿ ಅವರನ್ನು ಜನವರಿ 14ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕೋವಿಡ್–19 ಸೋಂಕು ಇರುವುದು ದೃಢಪಟ್ಟಿತ್ತು. ಅಲ್ಲಿಂದ ಅವರಿಗೆ ನಿರಂತರವಾಗಿ ವೈದ್ಯಕೀಯ ಆಮ್ಲಜನಕ ನೀಡಲಾಗುತ್ತಿದೆ. ಮಂಗಳವಾರ 8 ಲೀ ಆಮ್ಲಜನವನ್ನು ಅವರಿಗೆ ನೀಡಲಾಗಿದೆ. ಡಾ. ಕಣವಿ ಅವರ ಆಸ್ಪತ್ರೆ ವೆಚ್ಚ ಭರಿಸಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಹಿಂದಿನ ಲೇಖನಶುಕ್ರವಾರದ ಸಭೆ ನಂತರ ಅಂತಿಮ ನಿರ್ಧಾರ: ಸಚಿವ ಡಾ ಕೆ ಸುಧಾಕರ್
ಮುಂದಿನ ಲೇಖನ‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ರಾಮ್ ಗೋಪಾಲ್ ವರ್ಮಾ ಫಿದಾ