ದಾವಣಗೆರೆ : ಚಿಗಟೀರಿ ಜಿಲ್ಲಾಸ್ಪತ್ರೆ ಬಳಿ ನಡೆದಿದ್ದ ಪೊಲೀಸರ ಮೇಲಿನ ಹಲ್ಲೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಅಯೂಬ್ ಪೈಲ್ವಾನ್ ಅವರ ಮತ್ತಿಬ್ಬರು ಮಕ್ಕಳನ್ನು ಪೊಲೀಸರು ಬಂಧಿಸಿದ್ದಾರೆ.
ತಲೆಮರೆಸಿಕೊಂಡಿದ್ದ ಹುಸೇನ್ ಹಾಗೂ ಹಮ್ಝಾ ಬಂಧಿತ ಆರೋಪಿಗಳು. ಮೊಬೈಲ್ ಲೊಕೇಷನ್ ಹಾಗೂ ಸಿಡಿಆರ್ ಮಾಹಿತಿಗಳ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಳೆದ ಶನಿವಾರ ಹಲ್ಲೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲು ಬಡಾವಣೆ ಠಾಣೆಯ ಸಿಪಿಐ ಗಾಯಿತ್ರಿ ಹಾಗೂ ಕಾನ್ಸ್‌ಟೇಬಲ್ ಹರೀಶ್, ಕೆಂಚಪ್ಪ ತೆರಳಿದ್ದರು. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಯೂಬ್ ಪೈಲ್ವಾನ್ ಮತ್ತೊಬ್ಬ ಮಗ ಹಸೇನ್‍ನನ್ನು ಪೊಲಿಸರು ಬಂಧಿಸಿದ್ದರು.
ಆರೋಪಿಗಳ ಬಂಧನಕ್ಕೆ ಸಿಟಿ ಡಿವೈಎಸ್ಪಿ ಶರಣಬಸವೇಶ್ವರ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿತ್ತು. ಇಂದು (ಫೆ.3) ಮೆಡಿಕಲ್ ಟೆಸ್ಟ್ ನಂತರ ಪೊಲೀಸರು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.















