ಬೆಂಗಳೂರು(Bengaluru): ಪೊಲೀಸ್ ಕಾನ್ಸ್’ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡಾವಳಿ ಹೊರಡಿಸಿದ್ದಾರೆ.
ಪೊಲೀಸ್ ಕಾನ್ಸ್ಟೇಬಲ್(ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಅಂದರೆ 2022-23ನೇ ಸಾಲಿಗೆ ಮಾತ್ರ ಹೆಚ್ಚಿಸಲಾಗಿದೆ.
ಈ ವೇಳೆ ನೇಮಕಾತಿಗೆ ಕರೆದಿರುವ ಸಿಎಆರ್, ಡಿಎಆರ್ 420+3064 ಸೇರಿ ಒಟ್ಟೂ 3,484 ಹುದ್ದೆಗಳಿಗೆ ಮತ್ತು ಸಿವಿಲ್ ಪೊಲೀಸ್ ಕಾನ್ಸ್’ಟೇಬಲ್ 1,137+454 ಸೇರಿದಂತೆ ಒಟ್ಟು 1,591 ಹುದ್ದೆಗಳಿಗೆ ಮಾತ್ರ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳಿಗೆ ಹೆಚ್ಚಿಸಲಾಗಿದೆ.
ಉದ್ಯೋಗಾಕಾಂಕ್ಷಿಗಳ ಬಹುದಿನದ ಬೇಡಿಕೆಯಾಗಿದ್ದ ಗರಿಷ್ಠ ವಯೋಮಿತಿಯ ಕುರಿತಂತೆ ಸಂಬಂಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಅಗತ್ಯ ತಿದ್ದುಪಡಿ ಷರತ್ತಿನಂತೆ ಆದೇಶ ಹೊರಡಿಸಲಾಗಿದೆ.