Saval TV on YouTube
ಹಾಸನ(Hassan): ನಗರದ ಜಿಲ್ಲಾ ಕಾರಾಗೃಹದ ಮೇಲೆ ಗುರುವಾರ ನಸುಕಿನ ಜಾವ ಪೊಲೀಸರು ದಾಳಿ ಮಾಡಿದ್ದು, ಮೊಬೈಲ್ ಬಳಕೆ, ಮಾದಕ ವಸ್ತುಗಳನ್ನು ಪತ್ತೆ ಮಾಡಲಾಗಿದೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಡಿವೈಎಸ್’ಪಿ ಉದಯ್ ಭಾಸ್ಕರ್ ನೇತೃತ್ವದಲ್ಲಿ ದಾಳಿ ನಡೆದ ದಾಳಿಯಲ್ಲಿ ಮೊಬೈಲ್ ಫೋನ್ ಹಾಗೂ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಬೆಳಗಾವಿ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಹೋಗಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಹಾಸನದ ಜೈಲಿನ ಮೇಲೆಯೂ ಪೊಲೀಸರು ದಾಳಿ ನಡೆಸಿದ್ದಾರೆ. 80 ಕ್ಕೂ ಹೆಚ್ಚು ಪೊಲೀಸರು ತಪಾಸಣೆ ನಡೆಸಿದ್ದಾರೆ.
ವಿಚಾರಣಾಧೀನ ಕೈದಿಗಳು ಜೈಲಿನೊಳಗೆ ಫೋನ್ ಬಳಕೆ, ಮಾದಕ ವಸ್ತುಗಳನ್ನು ಸೇವಿಸುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.