ಮನೆ ರಾಜಕೀಯ ಪೊಲೀಸ್ ನೇಮಕಾತಿ: ವಯೋಮಿತಿ ಹೆಚ್ಚಿಸುವ ಕುರಿತು ಚಿಂತನೆ ನಡೆದಿದೆ- ಆರಗ ಜ್ಞಾನೇಂದ್ರ

ಪೊಲೀಸ್ ನೇಮಕಾತಿ: ವಯೋಮಿತಿ ಹೆಚ್ಚಿಸುವ ಕುರಿತು ಚಿಂತನೆ ನಡೆದಿದೆ- ಆರಗ ಜ್ಞಾನೇಂದ್ರ

0

ತುಮಕೂರು(Tumkur): ಪೊಲೀಸರ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಳ ಮಾಡುವಂತೆ ಸಾಕಷ್ಟು ಒತ್ತಡಗಳು ಬಂದಿವೆ. ಈ ಕುರಿತು ಚಿಂತನೆ ನಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳವಾರ ಹೇಳಿದರು.

ನಗರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಯುವ ಶಕ್ತಿ ಇರಬೇಕು ಎಂಬುದು ನನ್ನ ಆಶಯ. ಆದರೆ ಒತ್ತಡಗಳು ಹೆಚ್ಚಾಗುತ್ತಿವೆ. ಒತ್ತಡಗಳು ಬಂದ ಕಾರಣಕ್ಕೆ ನೇಮಕಾತಿ ಪ್ರಕ್ರಿಯೆಯನ್ನು ಒಂದು ತಿಂಗಳು ಕಾಲ ಮುಂದೂಡಲಾಗಿದೆ. ಎರಡು ವರ್ಷ ಸಡಿಲಿಕೆ ಮಾಡುವ ಆಲೋಚನೆ ಇದೆ. ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಚಿವರ ಕಾಲಿಗೆ ಬಿದ್ದು ಮನವಿ: ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ನೂರಾರು ಯುವಕರು ಸಚಿವ ಆರಗ ಜ್ಞಾನೇಂದ್ರ ಕಾಲಿಗೆ ಬಿದ್ದು, ಕಣ್ಣೀರಿಟ್ಟು ವಯೋಮಿತಿ ಸಡಿಲಿಸುವಂತೆ ಕೇಳಿಕೊಂಡರು.

ಕೋವಿಡ್ ಹಾಗೂ ಇತರ ಕಾರಣಗಳಿಂದಾಗಿ ಪೊಲೀಸರ ನೇಮಕಾತಿ ನಡೆದಿಲ್ಲ. ಈಗ ನೇಮಕಾತಿ ಪ್ರಕ್ರಿಯೆಗಳು ಆರಂಭವಾಗಿದ್ದು, ವಯೋಮಿತಿ ಸಡಿಲಿಸದಿದ್ದರೆ ಸಾಕಷ್ಟು ಮಂದಿಗೆ ಉದ್ಯೋಗ ಸಿಗುವುದಿಲ್ಲ. ಒಂದು ಬಾರಿಯಾದರೂ ಅವಕಾಶ ಮಾಡಿಕೊಡಬೇಕು ಎಂದು ಯುವಕ, ಯುವತಿಯರು ಪರಿಪರಿಯಾಗಿ ಬೇಡಿಕೊಂಡರು.

ಹಿಂದಿನ ಲೇಖನವಿದ್ಯುತ್ ಸ್ಪರ್ಶದಿಂದ ವನ್ಯಜೀವಿ, ಜನ ಸಾಮಾನ್ಯರ ಮರಣ ತಪ್ಪಿಸಲು ಮಾರ್ಗಸೂಚಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಮುಂದಿನ ಲೇಖನಚಾಮರಾಜನಗರ: ವೀರಭದ್ರೇಶ್ವರ ಸ್ವಾಮಿ ದೇವಾಲಯದ ರಥೋತ್ಸವದ ವೇಳೆ ರಥ ಪಲ್ಟಿ