ಬಳ್ಳಾರಿ: ಪಂಚನಾಮೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಪೋಕ್ಸೋ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿಯನ್ನು ಮಂಜುನಾಥ್ನನ್ನು ಸದ್ಯ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ (ವಿಮ್ಸ್) ದಾಖಲಿಸಲಾಗಿದೆ. ಆರೋಪಿ ಮಂಜುನಾಥ್ ಇತ್ತೀಚೆಗೆ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ತಲೆಮರೆಸಿಕೊಂಡಿದ್ದನು. ಪೊಲೀಸರು ಆರೋಪಿಯನ್ನು ಬುಧವಾರ ರಾತ್ರಿ ತೋರಣಗಲ್ಲಿನಲ್ಲಿ ಬಂಧಿಸಿದ್ದರು.
ಇಂದು ಬೆಳಗ್ಗೆ ಆತನನ್ನು ಪಂಚನಾಮೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದನು. ಆಗ ಸಿಬ್ಬಂದಿ ಆರೋಪಿ ಕಾಲಿಗೆ ಗುಂಡಿನೇಟು ಹೊಡೆಯಬೇಕಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ತಿಳಿಸಿದ್ದಾರೆ.
Saval TV on YouTube